Home / ಜಿಲ್ಲೆ / ಬೆಳಗಾವಿ / ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಬೆಳಗಾವಿ ಜಿಲ್ಲಾಡಳಿತ ಸಿದ್ಧತೆ………

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಬೆಳಗಾವಿ ಜಿಲ್ಲಾಡಳಿತ ಸಿದ್ಧತೆ………

Spread the love

ಬೆಳಗಾವಿ- ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿವೆ.ಪರೀಕ್ಷೆಗೆ ನಡೆಸಲು ಬೆಳಗಾವಿ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ.

ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ತಮ್ಮ ಬ್ಲಾಕ್,ಮತ್ತು ನಂಬರ್ ಗಳನ್ನು ಖಾತ್ರಿ ಪಡಿಸಿಕೊಂಡರು‌.

ಬೆಳಗಾವಿಯ ಸರ್ದಾರ್ ಹೈಸ್ಕೂಲ್ ನಲ್ಲಿರುವ ಪರೀಕ್ಷಾ ಕೇಂದ್ರಕ್ಕೂ ವಿದ್ಯಾರ್ಥಿಗಳು ತಮ್ಮ ಪೋಷಕರು ಬೆಳಿಗ್ಗೆಯೇ ಆಗಮಿಸಿದ್ದರು ಆದ್ರೆ ಶಾಲಾ ಸಿಬ್ಬಂಧಿಗಳು ನಿಗದಿತ ಸಮಯಕ್ಕೆ ಬಾರದೇ ಇರುವದರಿಂದ ಪೋಷಕರು ಕೆಲಕಾಲ ಪರದಾಡುವ ಪರಿಸ್ಥಿತಿ ಎದುರಾಯಿತು.

ಶಾಲಾ ಸಿಬ್ಬಂದಿಗಳು ಪರೀಕ್ಷಾ ಕೇಂದ್ರದ ಬಾಗಿಲು ತಡರೆದಾಗ ಅನೇಕ ಎಡವಟ್ಟುಗಳು ಎದುರಾದವು. ಯಡವಟ್ಟಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರದಾಡಿದ ಪ್ರಸಂಗವೂ ನಡೆಯಿತು.

ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಪರೀಕ್ಷಾ ಕೇಂದ್ರ ಇಂದು ಯಡವಟ್ಟಿನ ಕೇಂದ್ರವಾಗಿತ್ತು ಯಾಕಂದ್ರೆ ಇಲ್ಲಿ, ಬ್ಲಾಕ್ ನಂಬರ್, ನೋಂದಣಿ ಸಂಖ್ಯೆ ತಪ್ಪಾಗಿ ನಮೂದಿಸಲಾಗಿತ್ತು.16 ನೇ ಬ್ಲಾಕ್‌‌ನಲ್ಲಿರಬೇಕಾದ ವಿದ್ಯಾರ್ಥಿಯ ನೊಂದಣಿ ಸಂಖ್ಯೆ 20 ನೇ ಬ್ಲಾಕ್‌ನಲ್ಲಿ ಬರೆಯಲಾಗಿತ್ತು.

ಸೂಚನಾ ಫಲಕದಲ್ಲೇ ಒಂದು ರೀತಿಯ ಸಂಖ್ಯೆ ನಮೂದು,ಆಗಿತ್ತು ಪರೀಕ್ಷಾ ಬ್ಲಾಕ್ ನಂಬರ್‌ನಲ್ಲಿಯೇ ಒಂದು ನೋಂದಣಿ ಸಂಖ್ಯೆ ನಮೂದು ಆಗಿತ್ತು. ಪರೀಕ್ಷಾ ಕೇಂದ್ರದ ಸಿಬ್ಬಂದಿಯ ಪ್ರಮಾದಕ್ಕೆ ವಿದ್ಯಾರ್ಥಿಗಳ ಪರದಾಡಿದರು.

ಬೆಳಗಾವಿ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ನಾಲ್ಕು ಜನ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಮತಿ.ಸಿಕ್ಕಿಲ್ಲ.
ಓರ್ವ ಸೋಂಕಿತ ವಿದ್ಯಾರ್ಥಿ, ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಮೂರು ವಿದ್ಯಾರ್ಥಿಗಳು.
ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ನಾಲ್ಕು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ
20 ವಿದ್ಯಾರ್ಥಿಗಳು ಕಂಟೇನ್ಮೆಂಟ್ ಜೋನ್ ನಲ್ಲಿ ಪರೀಕ್ಷೆ ಬರೆಯಲಿದ್ದಾರೆ‌ ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 44 ವಿದ್ಯಾರ್ಥಿಗಳು ಕಂಟೇನ್ಮೆಂಟ್ ಜೋನ್ ನಲ್ಲಿ ಪ್ರತ್ಯೇಕ ವಾಗಿ ಪರೀಕ್ಷೆ ಬರೆಯಲಿದ್ದಾರೆ.

ಅನೇಕ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಮಾಸ್ಕ ಮತ್ತು ಸ್ಯಾನಿಟೈಸರ್ ಹಂಚಲಿವೆ.ಸಾಮಾಜಿಕ ಅಂತರ ಕಾಯ್ದು ಕೊಳ್ಳಲು ಪರೀಕ್ಷಾ ಕೇಂದ್ರಗಳಲ್ಲಿ ಒಂದು ಬೆಂಚಿನ ಮೇಲೆ ಒಬ್ಬ ವಿದ್ಯಾರ್ಥಿ ಮಾತ್ರ ಕುಳಿತು ಪರೀಕ್ಷೆ ಬರೆಯಲಿದ್ದಾನೆ‌.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ