ಬೆಂಗಳೂರು: ಲಾಕ್ ಡೌನ್ ಸಡಿಲಿಕೆಗೆ ಒಂದು ದಿನ ಮಾತ್ರ ಬಾಕಿಯಿದ್ದು, ಇದೇ ವೇಳೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಕೂಡ ಹೆಚ್ಚುತ್ತಲೇ ಇದೆ. ಇಂದು ಒಂದೇ ದಿನ ರಾಜ್ಯದಲ್ಲಿ 23 ಜನರಲ್ಲಿ ಕೊವಿಡ್ ಪಾಸಿಟೀವ್ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಬೆಳಗಿನ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 23 ಜನರಲ್ಲಿ ಕೊರೊನಾ ಸೋಂಕು ಪತ್ತೆ. ಬೆಂಗಳೂರಿನಲ್ಲಿ 14, ಹಾಸನ 3 ಮಂಡ್ಯದಲ್ಲಿ 1, ಬಾಗಲಕೋಟೆ, ಬಳ್ಳಾರಿ, ಧಾರವಾಡ, ದಾವಣಗೆರೆ, ಉಡುಪಿಯಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ.
ಇಂದು ಬೆಂಗಳೂರಿನಲ್ಲಿ ಪತ್ತೆಯಾದ 14 ಸೋಂಕಿತರು ಕೊರೊನಾ ರೋಗಿಯ ಜತೆ ದ್ವಿತೀಯ ಸಂಪರ್ಕದಲ್ಲಿದ್ದವರಾಗಿದ್ದಾರೆ. ಇನ್ನು ರಾಜ್ಯದಲ್ಲಿ 548 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.