ಬೆಳಗಾವಿ – – ಸಾಧು-ಸಂತರ ಮೇಲೆ ಮಹಾರಾಷ್ಟ್ರದಲ್ಲಿ ನಡೆದಿರುವ ಹಲ್ಲೆ ಖಂಡಿಸಿ ಶ್ರೀರಾಮ ಸೇನೆ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.
ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ ಈ ವಿಷಯ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಿಪಿಐ ಶಾಸಕನಿಂದ ಈ ದುಷ್ಕೃತ್ಯ ನಡೆದಿದ್ದು, ಆತನನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿರುವ ಅವರು, ಶ್ರೀರಾಮ ಸೇನೆಯ ಕಾರ್ಯಕರ್ತರು ರಾಜ್ಯದ್ಯಂತ ಮನೆಯಲ್ಲೇಯ ಸಾಧು ಸಂತರ ಫೋಟೋ ಇಟ್ಟು ಪ್ರತಿಭಟನೆ ನಡೆಸಿ, ಪ್ರಧಾನಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಇ ಮೇಲ್ ಮೂಲಕ ಪ್ರತಿಭಟನಾ ಪತ್ರ ಕಳಿಸಲಿದ್ದಾರೆ ಎಂದಿದ್ದಾರೆ.