Breaking News

ಪೊಲೀಸರಿಂದ ತಪ್ಪಿಸಿಕೊಳ್ಳಲು ಕೊಳದಲ್ಲಿ ಮುಳುಗಿ ಕುಳಿತಿದ್ದ ರೌಡಿಶೀಟರ್!

Spread the love

ಶಿವಮೊಗ್ಗ:‌ ಮಹಾಭಾರತ ಯುದ್ದದ ಕೊನೆಯ ದಿನ ಪಾಂಡವರಿಂದ ತಪ್ಪಿಸಿಕೊಳ್ಳಲು ದುರ್ಯೋಧನ ವೈಶಂಪಾಯನ ಸರೋವರದಲ್ಲಿ ಅಡಗಿ ಕುಳಿತಿದ್ದ ಕಥೆ ಎಲ್ಲರಿಗೂ ಗೊತ್ತಿದೆ. ಅದೇ ರೀತಿ ಪೊಲೀಸರಿಂದ  ತಪ್ಪಿಸಿಕೊಳ್ಳಲು ರೌಡಿಶಿಟರ್‌ ಒಬ್ಬ ಕೊಳದ ನೀರಲ್ಲಿ ಅರ್ಧಗಂಟೆ ಮುಳುಗಿ ಕುಳಿತ ಘಟನೆ ಭದ್ರಾವತಿಯಲ್ಲಿ ನಡೆದಿದೆ.

ಭದ್ರಾವತಿಯ ರೌಡಿಶೀಟರ್‌ ದಿಲೀಪ್‌ ಅಲಿಯಾಸ್‌ ಕರಿಯಾ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಳ್ಳದ ನೀರಿನಲ್ಲಿ ಅಡಗಿದ್ದ. ಈತನ ವಿರುದ್ಧ ಕಳ್ಳತನ, ಕೊಲೆ ಯತ್ನ ಸೇರಿ 16 ಪ್ರಕರಣಗಳಿವೆ. ಪ್ರಕರಣ ಒಂದರಲ್ಲಿ ಈತನ ವಿರುದ್ಧ ನ್ಯಾಯಾಲಯದಿಂದ ಮೂರು ಬಾರಿ ವಾರಂಟ್‌ ಜಾರಿಯಾಗಿತ್ತು. ಹೀಗಾಗಿ ಸೆ.2 ರಂದು ಅತನನ್ನು ಬಂಧಿಸಲು ನ್ಯೂ ಟೌನ್‌ ಪೊಲೀಸ್‌ ಠಾಣೆಯ ಸಿಬ್ಬಂದಿ ತೆರಳಿದ್ದರು. ಪೊಲೀಸರ ಬರುವಿಕೆ ತಿಳಿದು ದಿಲೀಪ್‌ ಪರಾರಿಯಾಗಿದ್ದ.

ಭಂಡಾರಹಳ್ಳಿಯ ಹಳ್ಳದ ಬಳಿ ಈತ ಇರುವ ಕುರಿತು ಪೊಲೀಸರಿಗೆ ಮಾಹಿತಿ ಸಿಕ್ಕಿದ್ದರಿಂದ ಅಲ್ಲಿಗೆ ತೆರಳಿದ್ದರು. ಆದರೆ ಅಲ್ಲೆಲ್ಲೂ ರೌಡಿ ಶೀಟರ್‌ ದಿಲೀಪ್‌ ಕಾಣಿಸಲಿಲ್ಲ. ಹಾಗಾಗಿ ಆತನಿಗಾಗಿ ಹುಡುಕಾಟ ನಡೆಸಿದರು. ಈ ವೇಳೆ ಹಳ್ಳದಲ್ಲಿ ಕಳೆ ಸರಿದಿರುವುದು ಪೊಲೀಸರ ಗಮನಕ್ಕೆ ಬಂದಿತ್ತು. ಅನುಮಾನದಂದ ಹಳ್ಳಕ್ಕೆ ಇಳಿದ ನ್ಯೂಟೌನ್‌ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ರಮೇಶ್‌ ಮತ್ತು ಸಿಬ್ಬಂದಿ ಪ್ರಸನ್ನ ಹುಡುಕಾಟ ನಡೆಸಿದರು. ಈ ಸಂದರ್ಭ ನೀರಿನ ಅಡಿಯಿಂದ ಗುಳ್ಳೆ ಬರುವುದನ್ನು ಗಮನಿಸಿದ ಪೊಲೀಸರು ಸುತ್ತುವರೆದು, ರೌಡಿ ಶೀಟರ್‌ ದಿಲೀಪ್‌ ಅಲಿಯಾಸ್‌ ಕರಿಯಾನನ್ನು ಹಿಡಿದಿದ್ದಾರೆ.

ಹಳ್ಳದಲ್ಲಿಯೇ ಆತನ ಕೈಗೆ ಕೋಳ ತೊಡಿಸಿದ ಪೊಲೀಸರು, ದಂಡೆ ಮೇಲೆ ಕರೆತಂದಿದ್ದಾರೆ. ನ್ಯೂ ಟೌನ್‌ ಠಾಣೆ ಪೊಲೀಸರ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾ


Spread the love

About Laxminews 24x7

Check Also

ಕಲಬುರಗಿಯಲ್ಲಿ ಭೀಕರ ಅಪಘಾತ – ತಾಯಿಯೊಂದಿಗೆ 3 ತಿಂಗಳ ಮಗು ಸ್ಥಳದಲ್ಲೇ ಸಾವು

Spread the loveಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಹೊರವಲಯದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ  ತಾಯಿಯೊಂದಿಗೆ ಮೂರು ತಿಂಗಳ ಮಗು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ