Breaking News

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ; 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಂಘಟನೆಗೆ ಪ್ಲ್ಯಾನ್

Spread the love

ಶಿವಮೊಗ್ಗ: ಕಾಂಗ್ರೆಸ್  ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕೆಪಿಸಿಸಿ ಆಯೋಜಿಸಿರುವ ‘ಭಾರತ್ ಜೋಡೋ 2.0’  ಪಾದಯಾತ್ರೆಗೆ ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಚಾಲನೆ ನೀಡಲಾಯಿತು.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದ್ದು, 2022ರಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಿಸಿ ನಾಲ್ಕು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಪಾದಯಾತ್ರೆ ಆಯೋಜಿಸಲಾಗಿದೆ. ಕಾಂಗ್ರೆಸ್ 2023ರ ವಿಧಾನಸಭಾ ಚುನಾವಣೆಯಲ್ಲಿ ಸೋತ 84 ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮ ನಡೆಸಲು ಯೋಜನೆ ರೂಪಿಸಿದೆ. ಒಟ್ಟು 84 ದಿನಗಳ ಕಾಲ 29 ಜಿಲ್ಲೆಗಳಲ್ಲಿ ಪಾದಯಾತ್ರೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.

ಶಿಕಾರಿಪುರದಲ್ಲಿ 10 ಕಿ.ಮೀ. ಪಾದಯಾತ್ರೆ
ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿಯಿಂದ ಪಾದಯಾತ್ರೆ ಆರಂಭವಾಗಿದ್ದು, ಮತ್ತಿಕೋಟೆ, ಹೊಸನಗರ ಕ್ರಾಸ್ ಹಾಗೂ ನೆಲವಾಗಿಲು ಮಾರ್ಗವಾಗಿ ಶಿಕಾರಿಪುರ ಪಟ್ಟಣದತ್ತ ಸಾಗುತ್ತಿದೆ. ಸುಮಾರು 10 ಕಿ.ಮೀ. ಪಾದಯಾತ್ರೆ ನಡೆಯಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬಳಿಕ ಶಿಕಾರಿಪುರದಲ್ಲಿ ಬಹಿರಂಗ ಸಮಾವೇಶ ನಡೆಯಲಿದೆ.

ಪಾದಯಾತ್ರೆಯಲ್ಲಿ ಸಚಿವರಾದ ಮಧು ಬಂಗಾರಪ್ಪ, ಕೆ.ಎಸ್. ಬಸವಂತಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಿಂದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ವಿಜಯೇಂದ್ರ ಕ್ಷೇತ್ರದಿಂದಲೇ ಯಾತ್ರೆ ಆರಂಭ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿನಿಧಿಸುವ ಶಿಕಾರಿಪುರ ಕ್ಷೇತ್ರದಿಂದಲೇ ‘ಭಾರತ್ ಜೋಡೋ 2.0’ ಆರಂಭಿಸಿರುವುದು ರಾಜಕೀಯ ಗಮನ ಸೆಳೆದಿದೆ. ಶಿಕಾರಿಪುರ ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿನಿಧಿಸಿದ್ದ ಕ್ಷೇತ್ರವೂ ಆಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಹಾಗೂ ಜನರೊಂದಿಗೆ ಸಂಪರ್ಕ ಹೆಚ್ಚಿಸುವ ಉದ್ದೇಶದಿಂದ ಈ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. ಮುಂದಿನ ಹಂತದಲ್ಲಿ ಅಕ್ಟೋಬರ್ 4 ಅಥವಾ 5ರಿಂದ ಇತರ ಕ್ಷೇತ್ರಗಳಲ್ಲಿ ಕಾರ್ಯಕ್ರಮಗಳು ಆರಂಭವಾಗಲಿವೆ. 


Spread the love

About Laxminews 24x7

Check Also

ಬಸವನ ಬಾಗೇವಾಡಿಯಲ್ಲಿ 3.5 ತೀವ್ರತೆಯ ಭೂಕಂಪನ

Spread the loveವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ  ತಾಲೂಕಿನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ. ರಾಷ್ಟ್ರೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ