Breaking News

ರೈತರು ಬೆಳೆದಿರುವ ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಂಬಲ ಬೆಲೆ ನೀಡಿ: ಭೀಮಪ್ಪ ಗಡಾದ

Spread the love

ಮೂಡಲಗಿ: ರೈತರು ಬೆಳೆದಿರುವ ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಂಬಲ ಬೆಲೆ ನೀಡಿ ಖರೀದಿಸುವ ಸಲುವಾಗಿ, ಪ್ರತಿ ತಾಲೂಕು ಹೋಬಳಿ ಮಟ್ಟದಲ್ಲಿ ಸರ್ಕಾರದಿಂದಲೇ ಖರೀದಿ ಕೇಂದ್ರಗಳನ್ನು ಪ್ರಾರಂಭಿಸುವುದರ ಮೂಲಕ ಸಂಭವಿಸಬಹುದಾದ ರೈತರ ಆತ್ಮಹತ್ಯೆಗಳನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಉತ್ತರ ಕರ್ನಾಟಕ ಹೋರಾಟ ಸಮೀತಿ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ತಿಳಿಸಿದ್ದಾರೆ.

ಕೊರೊನಾ ನಿಯಂತ್ರಿಸಲು ಕೇಂದ್ರ ಸರ್ಕಾರವು ಲಾಕ್‍ಡೌನ್ ಜಾರಿಗೆ ಮಾಡಿದೆ. ಜಿಲ್ಲೆಯ ರೈತರು ಬೆಳೆದಿರುವ ಗೋವಿನ ಜೋಳ, ಅರಷಿಣ, ದ್ರಾಕ್ಷಿ, ಕಲ್ಲಂಗಡಿ, ಟೋಮ್ಯಾಟೋ ಸೇರಿದಂತೆ ಇನ್ನಿತರ ಕೃಷಿ/ತೋಟಗಾರಿಕಾ ಉತ್ಪನ್ನಗಳನ್ನು ಬೇರೆ ಕಡೆಗೆ ಸಾಗಾಣಿಕೆ ಮಾಡಲು ವಾಹನಗಳು ಇಲ್ಲದೇ ಜಿಲ್ಲಾ ಮತ್ತು ಅಂತರ ರಾಜ್ಯ ನಿರ್ಬಂಧ ವಿರುವುದರಿಂದ ನೆರೆಯ ಮಹಾರಾಷ್ಟ್ರ ಮತ್ತು ಇತರ ಜಿಲ್ಲೆಗಳಲ್ಲಿರುವ ಮಾರುಕಟ್ಟೆಗಳಿಗೆ ಹೋಗಿ ಈ ಉತ್ಪನ್ನಗಳನ್ನು ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ.

ಸ್ಥಳೀಯವಾಗಿ ಇವುಗಳನ್ನು ಖರೀದಿಸಲು ಸಹ ವ್ಯಾಪಾರಸ್ಥರು ಮುಂದೆ ಬರುತ್ತಿಲ್ಲವಾದ್ದರಿಂದ ಈ ಎಲ್ಲ ಉತ್ಪನ್ನಗಳ ಬೆಲೆಗಳು ಕುಸಿದಿರುತ್ತವೆ. ಇದ್ದರಿಂದಾಗಿ ರೈತರು ಸಾಲ ಮಾಡಿ ಹಣತಂದು ಖರ್ಚು ಮಾಡಿ ಬೆಳೆದಿರುವ ಇವುಗಳನ್ನು ರಸ್ತೆಯ ಬದಿಗೆ, ಹಳ್ಳಕ್ಕೆ ಎಸೆಯುತ್ತಿರುವದು ವಿಷಾದನೀಯವಾಗಿದೆ.

ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಒಂದು ಕಡೆಯಾದರೆ, ಕಷ್ಟ ಪಟ್ಟು ತಾವು ಬೆಳೆದಿರುವ ಬೆಳೆಗಳಿಗೆ ಯೋಗ್ಯ ದಾರಣಿ ಸಿಗಲಿಲ್ಲವೆಂಬ ಕಾರಣಕ್ಕಾಗಿ ಸಾಲ ಮಾಡಿ ಇವುಗಳನ್ನು ಬೆಳೆದ ರೈತರು ಆತ್ಮಹತ್ಯಗೆ ಶರಣಾಗುವ ಪ್ರಸಂಗಗಳು ಕೂಡಾ ನಡೆಯಬಹುದಾಗಿದೆ. ಈ ಕುರಿತು ಸೂಕ್ತ ಕ್ರಮ ಕೈಕೊಳ್ಳುವ ಸಲುವಾಗಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಿ ಕೂಡಲೇ ಇದನ್ನು ಕಾರ್ಯರೂಪಕ್ಕೆ ತರುವಂತೆ ಜಿಲ್ಲಾಧಿಕಾರಿಯವರಿಗೆ ವಿನಂತಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ