Breaking News

ಬೆಳಗಾವಿ, ಚಿಕ್ಕೋಡಿಯಲ್ಲಿ “ಭೀಮಗಾಯನ”

Spread the love

ಬೆಳಗಾವಿ: ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಶ್ರಯದಲ್ಲಿ ಶುಕ್ರವಾರ(ಮಾ.6) ಚಿಕ್ಕೋಡಿಯ ಐ.ಎಂ.ಎ. ಸಭಾಂಗಣಲ್ಲಿ ಮತ್ತು ಶನಿವಾರ(ಮಾ.7) ಬೆಳಿಗ್ಗೆ 10.30 ಗಂಟೆಗೆ ಬೆಳಗಾವಿ ನಗರದ ಚೆನ್ಮಮ್ಮ ವೃತ್ತದ ಬಳಿಯ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ “ಭೀಮಗಾಯನ” ಕಾರ್ಯಕ್ರಮ ನಡೆಯಲಿದೆ.

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ಸಾಧನೆ, ಸಮಾನತೆಯ ಹೋರಾಟ, ಅಸ್ಪೃಶ್ಯತೆ ನಿರ್ಮೂಲನೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ನಡೆಯಲಿದೆ. ಸಮಾನತೆಯ ಸ್ವರ ಸಂಭ್ರಮ ಭೀಮನ ಆದರ್ಶಗಳನ್ನು ಸ್ವರಗಳಲ್ಲಿ ಜೀವಂತಗೊಳಿಸುವ ಜಾಗೃತಿ, ಆತ್ಮಗೌರವ ಮತ್ತು ಸಮಾನತೆಯ ಸಂಗೀತ ಕಾರ್ಯಕ್ರಮವೇ ಭೀಮ ಗಾಯನವಾಗಿದೆ. ಸಿದ್ಧಾರ್ಥ ಯುವ ಕ್ರೀಡಾ ಸಾಂಸ್ಕೃತಿಕ ಅಭಿವೃದ್ಧಿ ಸಂಘವು ಭೀಮಗಾಯನವನ್ನು ಪ್ರಸ್ತುತಪಡಿಸಲಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅವರು ಭೇಟಿ ನೀಡಿರುವ ರಾಜ್ಯದ ಪ್ರಮುಖ ಸ್ಥಳಗಳ ಪೈಕಿ ಆಯ್ದ ಸ್ಥಳಗಳಲ್ಲಿ ಭೀಮಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಐ.ಎಂ.ಎ. ಸಭಾಂಗಣದಲ್ಲಿ ಮಾ.6ರಂದು ಬೆಳಿಗ್ಗೆ 10.30 ಗಂಟೆಗೆ ಮತ್ತು ಬೆಳಗಾವಿ ನಗರದ ಡಾ.ಅಂಬೇಡ್ಕರ್ ಉದ್ಯಾನವನದಲ್ಲಿ ಭೀಮಗಾಯನ ನಡೆಯಲಿದೆ.

ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು “ಭೀಮಗಾಯನ” ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್(ರಾಜು) ಸೇಠ್ ಅವರು ಅಧ್ಯಕ್ಷತೆ ವಹಿಸಲಿದ್ದು, ಚಿಕ್ಕೋಡಿ ಕಾರ್ಯಕ್ರಮಕ್ಕೆ ಚಿಕ್ಕೋಡಿ-ಸದಲಗಾ ಶಾಸಕರಾದ ಗಣೇಶ್ ಹುಕ್ಕೇರಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಜಿಲ್ಲೆಯ ಎಲ್ಲ ಸಚಿವರು, ಶಾಸಕರು, ಸಂಸದರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಅಂಬೇಡ್ಕರ್ ಗೀತೆಗಳ ಈ ಮಹೋತ್ಸವಕ್ಕೆ ದಲಿತ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಇತರೆ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ ಪ್ರಕಟಣೆಯಲ್ಲಿ ಕೋರಿದ್ದಾರೆ.


Spread the love

About Laxminews 24x7

Check Also

ಚಿಕ್ಕೋಡಿ:ದ್ವಿತೀಯ ಪಿಯುಸಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Spread the loveಚಿಕ್ಕೋಡಿ: ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ