ಭೂಪಾಲ: ಮಧ್ಯಪ್ರದೇಶದಲ್ಲಿ ಪತ್ರಕರ್ತರೊಬ್ಬರಿಗೆ ಮಾರಕ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕಳೆದ ಎರಡು ಮೂರು ದಿನಗಳ ಹಿಂದೆ ಸೋಂಕು ತಗುಲಿರುವ ಲಕ್ಷಣಗಳು ಕಂಡು ಬಂದಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ರಕ್ತದ ಮಾದರಿ, ಕಫದ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇಂದು ವೈದ್ಯಕೀಯ ವರದಿ ಬಂದಿದ್ದು, ಕೊರೊನಾ ಸೋಂಕು ದೃಢಪಟ್ಟಿರುವುದು ಖಚಿತವಾಗಿದೆ.
ಈ ಹಿನ್ನೆಲೆಯಲ್ಲಿ ಪತ್ರಕರ್ತನ ಸಂಪರ್ಕದಲ್ಲಿದ್ದರಿಗೂ ಹೋಮ್ ಕ್ವಾರೆಂಟೈನ್ ನಲ್ಲಿ ಇರಿಸಲಾಗಿದೆ.
ಬೋಪಾಲ್ ನ ಬಹುತೇಕ ಎಲ್ಲ ಪತ್ರಕರ್ತರು ಕ್ವಾರೆಂಟೈನ್ ನಲ್ಲಿದ್ದು, ಎಲ್ಲ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಈಗ ಕೊರೊನಾ ಸೋಂಕು ದೃಢಪಟ್ಟಿರುವ ಪತ್ರಕರ್ತರು ಕೆಲ ದಿನಗಳ ಹಿಂದೆ ಮಾಜಿ ಸಿಎಂ ಕಮಲ್ ನಾಥ್ ನಡೆಸಿದ್ದ ಸುದ್ದಿಗೋಷ್ಟಿಯಲ್ಲೂ ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ.
ದೇಶದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದ್ದು, ಇದನ್ನು ತಡೆಗಟ್ಟಲು ರಾಷ್ಟ್ರವ್ಯಾಪಿ ಏ. 14 ರವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.