ಭೋಪಾಲ್: ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ತಾಯಿ ಮಾಧವಿ ರಾಜೇ ಅವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಇನ್ನು ಸಿಂಧಿಯಾರ ಪತ್ನಿ, ಮಗ ಮತ್ತು ಮಗಳ ವರದಿ ನೆಗೆಟಿವ್ ಬಂದಿದೆ.
ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಸಿಂಧಿಯಾ ತಮ್ಮ ತಾಯಿಯ ಜೊತೆ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಐದು ದಿನಗಳ ಹಿಂದೆ ಗ್ವಾಲಿಯರ್ ನಲ್ಲಿ ಸಿಂಧಿಯಾ, ತಾಯಿ ಮಾಧವಿ ರಾಜೇ, ಪತ್ನಿ ಪ್ರಿಯದರ್ಶಿನಿ, ಮಗಳು ಅನನ್ಯಾ ರಾಜೇ, ಪುತ್ರ ಮಾಹಾಆರ್ಯಮನ್ ಎಲ್ಲರೂ ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದರು. ಇದೀಗ ವರದಿ ಬಂದಿದ್ದು, ಇಬ್ಬರಿಗೆ ಸೋಂಕು ತಗುಲಿರೋದು ಖಚಿತವಾಗಿದೆ.
ರಾಜ್ಯಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿರೋ ಜ್ಯೋತಿರಾದಿತ್ಯ ಸಿಂಧಿಯಾ ಭೋಪಾಲ್ ನಲ್ಲಿ ನಾಮಪತ್ರ ಸಲ್ಲಿಕೆಯ ಬಳಿಕ ದೆಹಲಿಗೆ ತೆರಳಿದ್ದರು. ಲಾಕ್‍ಡೌನ್ ಸಮಯದಲ್ಲಿಯೂ ಸಿಂಧಿಯಾ ದೆಹಲಿಯಲ್ಲಿದ್ದರು.