ಬೆಳಗಾವಿ : ಕೊರೊನಾ ಸೋಂಕಿತ ರೋಗಿಯೊಬ್ಬರು ಚಿಕಿತ್ಸೆ ಸಿಗದೇ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಐಸಿಯುನಲ್ಲಿದ್ದ ಕೊರೊನಾ ರೋಗಿ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ್ದಾರೆ, ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಆಸ್ಪತ್ರೆ ಮುಂಭಾಗದ ಗಾಜು ಪುಡಿ ಪುಡಿ ಮಾಡಿದ್ದಾರೆ. ಬಳಿಕ ಆಸ್ಪತ್ರೆಯ ವೈದ್ಯರ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.