Breaking News

ರಾಜ್ಯದಲ್ಲಿ ಇಂದು ಕೊರೋನಾಗೆ 72 ಬಲಿ, ಬೆಂಗಳೂರಿನಲ್ಲಿ 2036 ಸೇರಿ 5072 ಮಂದಿಗೆ ಪಾಸಿಟಿವ್

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ‌ ಪ್ರಕರಣಗಳು ಏರಿಮುಖವಾಗಿಯೇ ಸಾಗಿದ್ದು, ಸತತ ಮೂರನೇ ದಿನವೂ 5 ಸಾವಿರದ ಗಡಿ ದಾಟಿದೆ. ರಾಜ್ಯದಲ್ಲಿ ಶನಿವಾರ 72 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90 ಸಾವಿರ ತಲುಪಿದೆ. ಇಂದು ರಾಜ್ಯದಲ್ಲಿ 5072 ಪ್ರಕರಣಗಳು ವರದಿಯಾಗಿದ್ದು, 72 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 90942ಕ್ಕೇರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ದಿನವೊಂದರಲ್ಲಿ 2403 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 33750ಕ್ಕೇರಿದಂತಾಗಿದೆ. ಒಟ್ಟು 1804 ಮಂದಿ ಸಾವನ್ನಪ್ಪಿದ್ದು, 55388 ಸಕ್ರಿಯ ಪ್ರಕರಣಗಳಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.

ಕೆ. ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ.

ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 2036 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 43503ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 30 ಮಂದಿ ಬಲಿಯಾಗಿದ್ದಾರೆ.


Spread the love

About Laxminews 24x7

Check Also

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Spread the loveಬೆಂಗಳೂರು: ಸ್ವಂತ ಅಕ್ಕ-ಭಾವನಿಂದಲೇ ತಂಗಿ-ಮೈದುನನ ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿದ ಆರೋಪ ಬೆಂಗಳೂರಿನ ಚಂದ್ರಾ ಲೇಔಟ್‌ನಲ್ಲಿ  ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ