Breaking News

ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ: ರಮೇಶ್ ಜಾರಕಿಹೊಳಿ‌

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ 885. 80 ಕೋಟಿ ಮೊತ್ತದ ಕಳಸಾ ನಾಲಾ ತಿರುವು ಯೋಜನೆಯ ಪರಿಷ್ಕೃತ ಯೋಜನಾ ವರದಿಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಹಾಗೆಯೇ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ನೆರಸೆ ಗ್ರಾಮದ ಬಳಿ ಬಂಡೂರ ಹಳ್ಳಕ್ಕೆ ಅಣೆಕಟ್ಟು ನಿರ್ಮಿಸಿ, ಕೂಡು ಕಾಲುವೆ ಮುಖಾಂತರ 2.18 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಮಲಪ್ರಭಾ ನದಿಗೆ ತಿರುಗಿಸುವ ಬಂಡೂರಿ ನಾಲಾ ತಿರುವು ಯೋಜನೆಗೂ ಆಡಳಿತಾತ್ಮಕ ಅನುಮೋದನೆ‌ ನೀಡಿದೆ‌.ಮಹತ್ವಾಕಾಂಕ್ಷೆಯ ಈ ಕಳಸಾ – ಬಂಡೂರಿ ಕುಡಿಯುವ ನೀರಿನ‌ ಯೋಜನೆಗಳ ವಿಸ್ತೃತ ಯೋಜನಾ ವರದಿಗೆ ತಾತ್ವಿಕ ಆಡಳಿತಾತ್ಮಕ‌ ಅನುಮೋದನೆ‌ ನೀಡಿದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅಭಿನಂದಿಸಿದ್ದಾರೆ.

ರಾಜ್ಯ ಸರ್ಕಾರವು ಒಂದು ವರ್ಷದ ಅವಧಿಯನ್ನು ಪೂರ್ಣಗೊಳಿಸುತ್ತಿರುವ ಈ ಸುಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಬಹು ದಿನಗಳ ಬೇಡಿಕೆಯಾಗಿದ್ದ ಈ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಈ ಸರ್ಕಾರ ಕಟಿಬದ್ಧವಾಗಿದ್ದು, ಶೀಘ್ರದಲ್ಲಿಯೇ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಈ ಯೋಜನೆಯ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ