Breaking News
Home / Uncategorized / ಬೆಳಗಾವಿ | ಕೋವಿಡ್-19: ‘ನೆಗೆಟಿವ್’ ಪ್ರಮಾಣವೂ ಹೆಚ್ಚಳ

ಬೆಳಗಾವಿ | ಕೋವಿಡ್-19: ‘ನೆಗೆಟಿವ್’ ಪ್ರಮಾಣವೂ ಹೆಚ್ಚಳ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಕಾರಣದಿಂದಾಗಿ 29 ದಿನಗಳಲ್ಲಿ 51 ಮಂದಿ ಸಾವಿಗೀಡಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆ, ಕ್ಯಾನ್ಸರ್, ಮಧುಮೇಹ, ವಿಷಮ ಶೀತಜ್ವರ ಮಾದರಿ ಅನಾರೋಗ್ಯ ಮೊದಲಾದ ಸಮಸ್ಯೆಗಳಿರುವವರು ಹೆಚ್ಚಿನ ಅಪಾಯಕ್ಕೆ ಒಳಗಾಗುತ್ತಿದ್ದಾರೆ.

ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳಲ್ಲಿ ಜಿಲ್ಲೆಯಲ್ಲಿ ಪರೀಕ್ಷೆಯ ಪ್ರಮಾಣ ಜಾಸ್ತಿಯಾಗಿದೆ. ಇದರೊಂದಿಗೆ ಸೋಂಕು ದೃಢಪಡುವ ಸಂಖ್ಯೆಯೂ ಹೆಚ್ಚಾಗಿದೆ. ಜಿಲ್ಲೆಯಲ್ಲಿ ನೆಗೆಟಿವ್ ಪ್ರಕರಣಗಳ ಸಂಖ್ಯೆಯೂ ದೊಡ್ಡ ಮಟ್ಟದಲ್ಲಿಯೇ ಇದೆ. ಸೋಮವಾರದವರೆಗೆ 40,173 ಮಂದಿಯಿಂದ ಗಂಟಲು ಅಥವಾ ಮೂಗಿನ ದ್ರವ ಸಂಗ್ರಹಿಸಲಾಗಿದ್ದು, ಇದರಲ್ಲಿ 35,332 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. 705 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

‘ಸಾರಿ’ ಸಮಸ್ಯೆ: ಜಿಲ್ಲಾಡಳಿತ ನೀಡಿರುವ ಮಾಹಿತಿ ಪ್ರಕಾರ, ಈವರೆಗೆ ಮೃತರಾಗಿರುವವರಲ್ಲಿ ಹೆಚ್ಚಿನವರು ತೀವ್ರ ಉಸಿರಾಟದ ತೊಂದರೆ (ಎಸ್‌ಎಆರ್‌ಐ)ಗೆ ಸಿಲುಕಿದವರೇ ಆಗಿದ್ದಾರೆ.

ಅವರು ಕೋವಿಡ್ ಆಸ್ಪತ್ರೆಯಾದ ಬಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸಿದೆ ಕೊನೆ ಉಸಿರೆಳೆದಿದ್ದಾರೆ. ಇವರಲ್ಲಿ ಬಹುತೇಕರು ಸರಾಸರಿ 50 ವರ್ಷ ಮೇಲಿನವರೇ ಆಗಿದ್ದಾರೆ. ಸೋಂಕು ವ್ಯಾಪಿಸುತ್ತಿರುವ ಜೊತೆಗೆ ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ವಿದ್ಯಮಾನವು ಜನರನ್ನು ಆತಂಕಕ್ಕೆ ದೂಡುತ್ತಿದೆ.

ಕೊರೊನಾ ಕಾಣಿಸಿಕೊಂಡ ಆರಂಭದ ಸಂದರ್ಭದಲ್ಲಿ, ಸೋಂಕಿತರು ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳ ಪ್ರವಾಸ ಮಾಡಿದ ಹಿನ್ನೆಲೆ ಉಳ್ಳವರಾಗಿರುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಮಂದಿಯ ‘ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸುತ್ತಿದೆ. ಇದೆಲ್ಲವನ್ನೂ ಗಮನಿಸಿದರೆ ಜಿಲ್ಲೆಯಲ್ಲಿ ಸೋಂಕು ಸಮುದಾಯಕ್ಕೆ ಹರಡಿದೆಯೇ ಎನ್ನುವ ಪ್ರಶ್ನೆಯೂ ಮೂಡುತ್ತಿದೆ. ಈ ಕಾರಣದಿಂದಾಗಿಯೇ ಪರೀಕ್ಷಾ ಪ್ರಮಾಣವನ್ನು ಕೂಡ ದ್ವಿಗುಣಗೊಳಿಸಲಾಗಿದೆ.

ಇತರ ಸಮಸ್ಯೆ ಇರುವುದರಿಂದ: ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಡಿಎಚ್‌ಒ ಡಾ.ಶಶಿಕಾಂತ ಮುನ್ಯಾಳ, ‘ಪರೀಕ್ಷೆ ಪ್ರಮಾಣ ಜಾಸ್ತಿ ಆಗಿರುವುದರಿಂದ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸೋಂಕು ಸಮುದಾಯಕ್ಕೆ ವ್ಯಾಪಿಸಿರುವುದನ್ನು ಗುರುತಿಸಿದ್ದೇವೆ. ಹೀಗಾಗಿ, ರೋಗ ಲಕ್ಷಣ ಇರುವವರನ್ನು ಪತ್ತೆ ಹಚ್ಚುವುದಕ್ಕಾಗಿ ವಿವಿಧ ಹಂತದಲ್ಲಿ ಪರೀಕ್ಷೆ ನಡೆಸುತ್ತಿದ್ದೇವೆ. ಜಾಸ್ತಿ ಪ್ರಮಾಣದಲ್ಲಿ ಹರಡದಂತೆ ನೋಡಿಕೊಳ್ಳಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇತರ ಆರೋಗ್ಯದ ಸಮಸ್ಯೆ ಇರುವವರು ಅಪಾಯಕ್ಕೆ ಸಿಲುಕುತ್ತಿದ್ದಾರೆ. ಪ್ರತಿರೋಧಕ ಶಕ್ತಿ ಕಡಿಮೆ ಇರುವವರಿಗೆ ಸಮಸ್ಯೆ ಆಗುತ್ತಿದೆ. ಹೀಗಾಗಿ, 50 ವರ್ಷ ಮೇಲಿನವರು ಹೆಚ್ಚಿನ ಕಾಳಜಿ ವಹಿಸಬೇಕು’ ಎಂದು ತಿಳಿಸಿದರು.


Spread the love

About Laxminews 24x7

Check Also

ಕೃಷ್ಣಾ ನದಿಯ ಹರಿವು ಹೆಚ್ಚಳ

Spread the loveಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ಹೆಚ್ಚು ಸುರಿಯುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪ ವಿಭಾಗದ ಕೃಷ್ಣಾ ಅದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ