ಬೆಳಗಾವಿ: ಕಿಲ್ಲರ್ ಕೊರೊನಾಗೆ ಜಿಲ್ಲೆಯಲ್ಲಿ ಕೇವಲ 10 ಗಂಟೆಯಲ್ಲಿ 11 ಸೋಂಕಿತರು ಸಾವನ್ನಪ್ಪಿದ್ದಾರೆ.
ಸದಾಶಿವ ನಗರದ ಸ್ಮಶಾನದಲ್ಲಿ ಏಕಕಾಲಕ್ಕೆ ಮೃತರ ಅಂತ್ಯಕ್ರಿಯೆ ನಡೆಸಲಾಯಿತು. ಸ್ಮಶಾನದಲ್ಲಿ ಸಾಲು ಸಾಲಾಗಿ ಸೋಂಕಿತರ ಶವ ಇಟ್ಟು ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮೃತರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.
ಸದಾಶಿವ ನಗರದ ಸ್ಮಶಾನದಲ್ಲಿ ಮಧ್ಯಾಹ್ನ 2ರವರೆಗೆ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಸಮಯ ಮೀಸಲಿಡಲಾಗಿದೆ. ಮಧ್ಯಾಹ್ನ 2 ಗಂಟೆ ಬಳಿಕ ಸಹಜವಾಗಿ ಸಾವನ್ನಪ್ಪಿದವರ ಅಂತ್ಯಕ್ರಿಯೆಗೆ ಮಹಾನಗರ ಪಾಲಿಕೆ ಅವಕಾಶ ಕಲ್ಪಿಸಿದೆ.