ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರನನು ಪಕ್ಷದ ಪದಾಧಿಕಾರಿಗಳು, ಬೆಂಬಲಿಗರು ಅದ್ದೂರಿಯಾಗಿ ಬರ ಮಾಡಿಕೊಂಡು, ಸತ್ಕರಿಸಿದರು.
ಸಾಂಬ್ರಾ ವಿಮಾನ ನಿಲ್ದಾಣದಿಂದ ನೇವರಾಗಿ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಮಾಜಿ ಶಾಸಕ ರಾಜುಗೌಡ ಕಾಗೆ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ ರಾವ್ ಚಿಂಗಳೆ, ರಾಜು ಸೇಠ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ ಹೆಬ್ಬಾಳ್ಕರ್ ಸೇರಿದಂತೆ ಹಲವರು ಹೂಗುಚ್ಚ ನೀಡಿ, ಸತ್ಕರಿಸಿದರು.
ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.