Breaking News

ಬೆಳಗಾವಿಯಲ್ಲಿ ಕೊರೊನಾ ಭೀತಿ ನಡುವೆ ಡೆಂಗ್ಯೂಗೆ ಬಾಲಕ ಬಲಿ

Spread the love

ಬೆಳಗಾವಿ, ಜುಲೈ 6: ಕೊರೊನಾ ವೈರಸ್ ಭೀತಿ ನಡುವೆಯೇ ಬೆಳಗಾವಿಯಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ. ಬೆಳಗಾವಿಯ ವಡಗಾವಿಯ ವಿಷ್ಣು ಗಲ್ಲಿ ನಿವಾಸಿ, 12 ವರ್ಷದ ಬಾಲಕ ಡೆಂಗ್ಯೂಗೆ ಬಲಿಯಾದ್ದಾನೆ
ವರದ್ ಕಿರಣ್ ಪಾಟೀಲ್ (12) ಡೆಂಗ್ಯೂಗೆ ಬಲಿಯಾದ ಬಾಲಕ. ಕೆಎಲ್‌ಎಸ್ ಶಾಲೆಯ ಆರನೇ ತರಗತಿ ವಿದ್ಯಾರ್ಥಿಯಾಗಿದ್ದ ವರದ ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ನಿನ್ನೆ ಜುಲೈ 5ರಂದು ಸಾವನ್ನಪ್ಪಿದ್ದಾನೆ
ಕೊರೊನಾ ವೈರಸ್ ನಿಂದಾಗಿ ಈಗಾಗಲೇ ಆಸ್ಪತ್ರೆಯಲ್ಲಿ ರೋಗಿಗಳ ಪ್ರವೇಶ ನಿಂತಿದೆ.
ಇದೀಗ ಕಾಣಿಸಿಕೊಂಡಿರುವ ಡೆಂಗ್ಯೂ ಪ್ರಕರಣದ ಕುರಿತು ಪಾಲಿಕೆಯ ಆರೋಗ್ಯ ವಿಭಾಗದ ಕಾರ್ಯವೈಖರಿಯನ್ನು ನಾಗರಿಕರು ಪ್ರಶ್ನಿಸಿದ್ದಾರೆ.

 

ಜಿಲ್ಲಾ ಆರೋಗ್ಯ ಇಲಾಖೆ ಪ್ರಸ್ತುತ ಕೊರೊನಾ ಸೋಂಕಿನತ್ತ ಗಮನ ಹರಿಸುತ್ತಿದ್ದು, ಪಾಲಿಕೆ ಮತ್ತು ಆರೋಗ್ಯ ಇಲಾಖೆ ಡೆಂಗ್ಯೂ ಮುಂತಾದ ಕಾಯಿಲೆಗಳನ್ನು ನಿರ್ಲಕ್ಷಿಸಿದೆ ಎಂದು ಜನರು ದೂರುತ್ತಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ