ಬೆಳಗಾವಿ: ಪಾಚ್ಛಾಪೂರ ಜಿಲ್ಲಾ ಪಂಚಾಯತ ಹಾಗೂ ಹತ್ತರಗಿ ಠಾಣಾ ಜಿಲ್ಲಾ ಪಂಚಾಯತ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಕಾಮಗಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು.
ಅರಳಿಕಟ್ಟಿ, ಹಳೆವಂಟಮೂರಿ, ಬಿರನಹೊಳಿ, ಕಾಟಾಬಳಿ, ಇಸ್ಲಾಂಪೂರ, ಚಿಕ್ಕಲದಿನ್ನಿ, ಶಹಾಬಂದರ, ಗೆಜಪತಿ, ಗುಟಗುದ್ದಿ, ರಾಜಕಟ್ಟಿ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.