Breaking News

ಬಿಡದಿ ಟೌನ್‌ಶಿಪ್| ಕೋರ್ಟ್ ಅನುಮತಿ ಇಲ್ಲದೆ ಒಂದು ಇಟ್ಟಿಗೆಯೂ ಅಲುಗಾಡುವಂತಿಲ್ಲ, ಮರ ಕಡಿಯುವಂತಿಲ್ಲ: ಹೈಕೋರ್ಟ್

Spread the love

ಬೆಂಗಳೂರು: ನ್ಯಾಯಾಲಯದ ಅನುಮತಿಯಿಲ್ಲದೆ ಬಿಡದಿ ಟೌನ್‌ಶಿಪ್‌ ಯೋಜನಾ ಪ್ರದೇಶದಲ್ಲಿ ಒಂದು ಇಟ್ಟಿಗೆಯನ್ನೂ ಅಲುಗಾಡಿಸುವಂತಿಲ್ಲ ಹಾಗೂ ಒಂದೇ ಒಂದು ಮರವನ್ನೂ ಕಡಿಯುವಂತಿಲ್ಲ ಎಂದು ಸರ್ಕಾರಕ್ಕೆ ಹೈಕೋರ್ಟ್‌ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಬಿಡದಿ ಸ್ಮಾರ್ಟ್ ಸಿಟಿಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಶ್ನಿಸಿ ನಾಲ್ವರು ರೈತರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ಪೀಠದಲ್ಲಿ ನಡೆಯಿತು.

ಸರ್ಕಾರ ಪರಿಹಾರ ಮೊತ್ತವನ್ನು ನಿಗದಿಪಡಿಸಿದ ತಕ್ಷಣವೇ ಬುಲ್ಡೋಜರ್ ತೆಗೆದುಕೊಂಡು ಹೋದರೆ ಹೇಗೆ? ರಾತ್ರೋರಾತ್ರಿ ಆಸ್ತಿ ನಾಶಪಡಿಸುವ ಕೆಲಸಕ್ಕೆ ಸರ್ಕಾರ ಕೈಹಾಕಬಾರದು ಎಂದು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು. ಅಷ್ಟೇ ಅಲ್ಲದೇ ಪರಿಹಾರ ಮೊತ್ತ ಪ್ರಕಟವಾದರೂ ಕೂಡ ಹೈಕೋರ್ಟ್ ಅನುಮತಿ ಪಡೆಯದೆ ಕೃಷಿಕರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಸೂಚನೆ ನೀಡಿತು.

ಬಹಳಷ್ಟು ರೈತರು ಭೂಮಿ ನೀಡಲು ಸ್ವಯಂಪ್ರೇರಿತರಾಗಿ ಮುಂದೆ ಬಂದಿದ್ದಾರೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ದಾಖಲೆಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿಲ್ಲ. ವಾಸ್ತವದಲ್ಲಿ ಶೇ. 5 ರಷ್ಟು ರೈತರೂ ಸಹ ಭೂಮಿ ನೀಡಲು ಒಪ್ಪಿಲ್ಲ ಎಂದು ರೈತರ ಪರ ವಕೀಲರು ವಾದ ಮಂಡಿಸಿದರು.


Spread the love

About Laxminews 24x7

Check Also

ವಿಷಕಾರಿ ದತ್ತೂರ ಬೀಜಗಳ ಮಾರಾಟ – ಮೂರು ಇ ಕಾಮರ್ಸ್‌ ಜಾಲತಾಣಗಳ ಆಹಾರ ಪರವಾನಗಿ ಅಮಾನತು

Spread the loveಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು ಆಹಾರ ಉತ್ಪನ್ನಗಳಾಗಿ ಮಾರಾಟ ಮಾಡುತ್ತಿದ್ದ ಇ-ಕಾಮರ್ಸ್ ಜಾಲತಾಣಗಳ ಆಹಾರ ಪರವಾನಗಿ  ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ