Breaking News

ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

Spread the love

ಬೀದರ್: ಮನೆಯ ಮುಂದೆ ಆಟ ಆಡುವ ಸಮಯದಲ್ಲಿ ಚರಂಡಿಗೆ  ಬಿದ್ದು ಬಾಲಕ  ಸಾವನ್ನಪ್ಪಿದ ಘಟನೆ ಬೀದರ್  ತಾಲೂಕಿನ ಮಲ್ಲಿಕ್‌ಮರ್ಜಾಪುರ ಗ್ರಾಮದಲ್ಲಿ ನಡೆದಿದೆ.

5 ವರ್ಷದ ಅವಿನಾಶ್ ಮೃತ ಬಾಲಕ. ಆಟವಾಡುವ ವೇಳೆ ಮನೆಯ ಮುಂದಿನ ಚರಂಡಿ ಕಾಲುವೆಗೆ ಬಿದ್ದು ಬಾಲಕ ಮೃತಪಟ್ಟಿದ್ದಾನೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಶುಕ್ರವಾರ ಸಂಜೆ 6 ಗಂಟೆಯಿಂದ ಕಾಣೆಯಾಗಿದ್ದ ಬಾಲಕನಿಗಾಗಿ ಕುಟುಂಬಸ್ಥರು ಹುಡುಕಾಡುತ್ತಿದ್ದರು. ಆದರೆ ಬಾಲಕನ ಸುಳಿವು ಪತ್ತೆಯಾಗಿರಲಿಲ್ಲ. ಬಳಿಕ ಮನೆಯ ಮುಂದಿನ ಚರಂಡಿಗೆ ಬಿದ್ದು ಮಗು ಸಾವನ್ನಪ್ಪಿರುವುದು ಗೊತ್ತಾಗಿದೆ. ಬಗದಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ನೇಣು ಬಿಗಿದು ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

Spread the loveಬೀದರ್: ಪ್ಯಾನ್‌ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ  ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಗರದ ಬ್ರಿಮ್ಸ್  ಕಾಲೇಜು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ