Breaking News

ಬೀದರ್: ಶೀಲ ಶಂಕಿಸಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ

Spread the love

ಬೀದರ್: ಅನೈತಿಕ ಸಂಬಂಧದ ಶಂಕೆಯಿಂದ ಪತಿಯೊಬ್ಬ ತನ್ನ ಪತ್ನಿಯನ್ನು ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮನ್ನಳ್ಳಿ ಗ್ರಾಮದ ನಿವಾಸಿ ಅಶ್ವಿನಿ (28) ಎಂದು ಗುರುತಿಸಲಾಗಿದೆ. ಆರೋಪಿ ಪತಿ ಕಿಶನ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಶನಿವಾರ ಇಡೀ ರಾತ್ರಿ ಕಿಶನ್ ತನ್ನ ಪತ್ನಿ ಅಶ್ವಿನಿಯೊಂದಿಗೆ ಶೀಲ ಶಂಕೆಯ ವಿಚಾರವಾಗಿ ಜಗಳವಾಡಿದ್ದನು. ಪತ್ನಿ ಇನ್ನೊಬ್ಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ ಕಿಶನ್‌ನನ್ನು ಕಾಡುತ್ತಿತ್ತು. ಇದೇ ಕಾರಣದಿಂದಾಗಿ ಗಂಡ-ಹೆಂಡತಿಯ ನಡುವೆ ಪದೇಪದೇ ಕಲಹ ನಡೆಯುತ್ತಿತ್ತು. ನಸುಕಿನ ಜಾವ ಸುಮಾರು 4 ಗಂಟೆ ಸುಮಾರಿಗೆ, ಕೋಪ ಮಿತಿಮೀರಿ ಕಿಶನ್ ತನ್ನ ಪತ್ನಿಯ ಮುಖ ಮತ್ತು ತಲೆಯ ಮೇಲೆ ದೊಡ್ಡ ಕಲ್ಲನ್ನು ಎತ್ತಿಹಾಕಿ ಹತ್ಯೆಗೈದಿದ್ದಾನೆ. ಘಟನೆಯಲ್ಲಿ ಅಶ್ವಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಅಶ್ವಿನಿ ತನ್ನ ಪತಿ ಶೀಲ ಶಂಕೆಯಿಂದ ತನಗೆ ಕಿರುಕುಳ ನೀಡುತ್ತಿದ್ದಾನೆ ಎಂಬ ವಿಷಯವನ್ನು ಕೆಲ ದಿನಗಳ ಹಿಂದೆಯೇ ತನ್ನ ತಂದೆ ಹಾಗೂ ಕುಟುಂಬಸ್ಥರಿಗೆ ತಿಳಿಸಿದ್ದಳು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕಿಶನ್‌ಗೆ ಬುದ್ಧಿವಾದ ಹೇಳಿ, ದಂಪತಿಯ ನಡುವೆ ಸಂಧಾನಕ್ಕೆ ಪ್ರಯತ್ನಿಸಿದ್ದರೂ, ಗಂಡ-ಹೆಂಡತಿಯ ನಡುವಿನ ಜಗಳ ಶಮನವಾಗಿರಲಿಲ್ಲ. ಕೊನೆಗೆ ಈ ದೀರ್ಘಕಾಲದ ಅನುಮಾನ ಮತ್ತು ಕಲಹ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ.


Spread the love

About Laxminews 24x7

Check Also

ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ – 6 ವರ್ಷದಲ್ಲಿ ಬರೋಬ್ಬರಿ 9.73 ಕೋಟಿ ದಂಡ ವಸೂಲಿ

Spread the loveಬೀದರ್: ಜಿಲ್ಲೆಯಲ್ಲಿ ಕಳೆದ 6 ವರ್ಷಗಳಲ್ಲಿ ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ ಮಾಡಿ ಅತೀ ಹೆಚ್ಚು ಸಂಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ