ಬೀದರ್: ಪ್ರೆಟ್ರೋಲ್ ಬಂಕ್ನಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಸವಕಲ್ಯಾಣ ತಾಲೂಕಿನ ಚಂಡಕಾಪುರ ಗ್ರಾಮದ ಬಳಿಯ ಪೆಟ್ರೋಲ್ ಬಂಕ್ನಲ್ಲಿ ನಡೆದಿದೆ.
ಬಸವಕಲ್ಯಾಣ ನಗರದ ಬಸವೇಶ್ವರ ದೇವಸ್ಥಾನ ಪಂಚ ಕಮಿಟಿಯ ಅಧ್ಯಕ್ಷ ಅನಿಲ್ ರಗಟೆ ಎಂಬುವವರಿಗೆ ಸೇರಿದ ಬಂಕ್ ಇದಾಗಿದ್ದು, ವಿದ್ಯುತ್ ಸ್ಪರ್ಶಿಸಿ ಮಂಠಾಳ ಗ್ರಾಮದ ಅಮಿತ್ (19) ಮೃತಪಟ್ಟಿದ್ದಾನೆ. ಪೆಟ್ರೋಲ್ ಬಂಕ್ನ ಕಟ್ಟಡದ ಮೇಲಿದ್ದ ಸೋಲಾರ್ ತೊಳೆಯುವಾಗ ದುರ್ಘಟನೆ ಸಂಭವಿಸಿದೆ.
ಬಂಕ್ನಲ್ಲಿ ಪೆಟ್ರೋಲ್, ಡಿಸೇಲ್ ತುಂಬಿಸಲು ಅಂತ ಕೆಲಸಕ್ಕೆ ಸೇರಿಸಿಕೊಂಡು ಸೋಲಾರ್ ತೊಳೆಯಲು ಬಿಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಬಸವಕಲ್ಯಾಣ ನಗರದ ಬಸವೇಶ್ವರ ವೃತ್ತದಲ್ಲಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಪೆಟ್ರೋಲ್ ಬಂಕ್ ಮಾಲೀಕನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Laxmi News 24×7