Breaking News

ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್‌ಗೆ ಬಿಗ್ ರಿಲೀಫ್: ನ್ಯಾಯಾಲಯದ ಮಹತ್ವದ ಆದೇಶ

Spread the love

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಮತ್ತೆ ಬೆನ್ನುನೋವು ಕಾಣಿಸಿಕೊಂಡಿದೆ. ಚಳಿಗಾಲ ಆರಂಭವಾಗುತ್ತಿದ್ದಂತೆ ನೋವು ಹೆಚ್ಚಾಗಿದ್ದು, ಸೂಕ್ತ ಚಿಕಿತ್ಸೆ ನೀಡುವಂತೆ ಜೈಲಾಧಿಕಾರಿಗಳಲ್ಲಿ ಮನವಿ ಮಾಡಿದ್ದರು. ಆದರೆ ನ್ಯಾಯಾಲಯದ ಅನುಮತಿ ಇಲ್ಲದೆ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು. ಹೀಗಾಗಿ ದರ್ಶನ್ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ನ್ಯಾಯಾಲಯ ಅನುಮತಿ ನೀಡಿದೆ.

ದರ್ಶನ್ ಪರ ವಕೀಲ ಹಷ್ಮತ್ ಪಾಷ ಅವರು 59ನೇ ಸೆಷನ್ಸ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ದರ್ಶನ್‌ಗೆ ಹಲವು ವರ್ಷಗಳಿಂದ ಬೆನ್ನುನೋವಿನ ಸಮಸ್ಯೆ ಇದೆ. ಈ ಹಿಂದೆ ಬಂಧನದಲ್ಲಿದ್ದಾಗಲೂ ಫಿಸಿಯೋಥೆರಪಿ ಚಿಕಿತ್ಸೆ ಪಡೆದಿದ್ದರು. ಹೀಗಾಗಿ ಈ ಬಾರಿಯೂ ಜೈಲಿನಲ್ಲೇ ಚಿಕಿತ್ಸೆ ನೀಡಲು ಅವಕಾಶ ಕಲ್ಪಿಸಬೇಕು ಎಂದು ವಾದಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಸರ್ಕಾರಿ ಅಭಿಯೋಜಕರು, ಕಳೆದ ಬಾರಿ ಜಾಮೀನು ಪಡೆಯುವ ಸಂದರ್ಭದಲ್ಲೂ ಬೆನ್ನುನೋವಿನ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಉಲ್ಲೇಖಿಸಲಾಗಿತ್ತು ಎಂದು ತಿಳಿಸಿದರು. ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದಾಗಿ ಹೇಳಿ ಜಾಮೀನು ಪಡೆದಿದ್ದರೂ, ಬಳಿಕ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರಲಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಯ ಮನವಿಯನ್ನು ಪರಿಶೀಲಿಸುವಂತೆ ಕೋರಿದರು.


Spread the love

About Laxminews 24x7

Check Also

ಮಹಾರಾಜರು ಅರಮನೆ ಕಟ್ಟಿಸಿದ್ದು ಜನರ ತೆರಿಗೆಯ ಹಣದಿಂದಲೇ, ಎಲ್ಲವೂ ಜನರಿಗೇ ಸೇರಬೇಕು: ಯತೀಂದ್ರ ಸಿದ್ದರಾಮಯ್ಯ

Spread the loveಮೈಸೂರು: ಮಹಾರಾಜರು ಅರಮನೆ ಕಟ್ಟಿಸಿದ್ದು ಕೂಡ ಜನರ ತೆರಿಗೆಯ ಹಣದಿಂದಲೇ, ಹೀಗಾಗಿ ಎಲ್ಲವೂ ಜನರಿಗೇ ಸೇರಬೇಕು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ