Breaking News

SIR ಸರ್ವೆ ವೇಳೆ ಮತ್ತೊಬ್ಬ BLO ಹೃದಯಾಘಾತದಿಂದ ಸಾವು

Spread the love

ಬೀದರ್: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ  ಸರ್ವೆ ಕಾರ್ಯದ ವೇಳೆ ಬಿಎಲ್‌ಒ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೀದರ್ಜಿಲ್ಲೆಯ ಅಮಲಾಪುರ ಗ್ರಾಮದಲ್ಲಿ ನಡೆದಿದೆ.

45 ವರ್ಷದ ಸುನೀಲ್ ಮೃತ BLO. ಭಾಲ್ಕಿ ತಾಲೂಕಿನ ಮೂಲದ ಸುನೀಲ್ ಅವರು ಕಳೆದ ಹಲವು ದಿನಗಳಿಂದ SIR ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಅಮಲಾಪುರ ಗ್ರಾಮದ 33ನೇ ಬೂತ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಬಳಿಕ ಕುಸಿದು ಬಿದ್ದಿದ್ದಾರೆ.

ಸ್ಥಳೀಯರು ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ವೇಳೆ ಸ್ಟಂಟ್ ಅಳವಡಿಸುವ ಸಂದರ್ಭದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ