Breaking News

ಯುವಕನನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ಬಲವಂತದ ಮದುವೆ

Spread the love

ಬಿಹಾರದಲ್ಲಿ ಮತ್ತೆ ಬಲವಂತದ ಮದುವೆ ಪದ್ಧತಿ ಮುನ್ನೆಲೆಗೆ ಬಂದಿದ್ದು, ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯೊಬ್ಬರನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ಬಲವಂತವಾಗಿ ಮದುವೆ ಮಾಡಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬಿಹಾರದ ಲಖಿಸರಾಯ್ ಜಿಲ್ಲೆಯ ನಿವಾಸಿ, ಹೋಮ್ ಗಾರ್ಡ್ ಹುದ್ದೆಯ ಆಕಾಂಕ್ಷಿಯಾದ ಯುವಕ ದೈಹಿಕ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದರು. ಈ ವೇಳೆ ಕೆಲವು ವ್ಯಕ್ತಿಗಳು ಅವರನ್ನು ಅಪಹರಿಸಿದ್ದಾರೆ. ಅಪಹರಣಕಾರರು ಯುವಕನಿಗೆ ಮಾದಕ ದ್ರವ್ಯ ಬೆರೆಸಿದ ಪಾನೀಯವನ್ನು ನೀಡಿದ್ದರಿಂದ ಅವರು ಪ್ರಜ್ಞೆ ಕಳೆದುಕೊಂಡಿದ್ದರು ಎನ್ನಲಾಗಿದೆ. ಯುವಕನ ಹೇಳಿಕೆಯ ಪ್ರಕಾರ, ಅವರು ಕಣ್ಣು ಬಿಟ್ಟಾಗ ಮದುವೆ ಮಂಟಪದಲ್ಲಿದ್ದರು.

ಮಾದಕ ದ್ರವ್ಯದ ಪ್ರಭಾವದಿಂದ ಅವರು ಅರೆ ಪ್ರಜ್ಞಾವಸ್ಥೆಯಲ್ಲಿದ್ದಾಗಲೇ, ಬೆದರಿಕೆ ಹಾಕಿ ಯುವತಿಯೊಬ್ಬಳ ಜೊತೆ ಮದುವೆ ವಿಧಿವಿಧಾನಗಳನ್ನು ಮಾಡಲಾಗಿದೆ. ನಾನು ಎಚ್ಚರಗೊಂಡಾಗ ಮದುವೆಯ ಕಾರ್ಯಗಳು ನಡೆಯುತ್ತಿದ್ದವು, ನನಗೆ ಏನಾಗುತ್ತಿದೆ ಎಂದು ಅರ್ಥವಾಗುವಷ್ಟರಲ್ಲಿ ಮದುವೆ ಮುಗಿದಿತ್ತು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ

Spread the loveಕಲಬುರಗಿ/ಬೀದರ್: ಜೂನ್ 28ರಂದು ಬೀದರ್‌ನ ಬಸವಕಲ್ಯಾಣದಲ್ಲಿ ನಡೆಯಲಿರುವ ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಕರ್ನಾಟಕ ಹೈಕೋರ್ಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ