Home / ಜಿಲ್ಲೆ / ಬಿಜಾಪುರ / ವಿಜಯಪುರದಲ್ಲಿ 686 ಜನರ ಮೇಲೆ ನಿಗಾ, 335ಕ್ಕೂ ಹೆಚ್ಚು ಜನ ಐಸೋಲೇಷನ್‍ಗೆ

ವಿಜಯಪುರದಲ್ಲಿ 686 ಜನರ ಮೇಲೆ ನಿಗಾ, 335ಕ್ಕೂ ಹೆಚ್ಚು ಜನ ಐಸೋಲೇಷನ್‍ಗೆ

Spread the love

ವಿಜಯಪುರ: ಜಿಲ್ಲೆಯಲ್ಲಿ ಇಲ್ಲಿಯವರೆಗೆ 686 ಜನರ ಮೇಲೆ ನಿಗಾ ವಹಿಸಲಾಗಿದ್ದು, 335ಕ್ಕೂ ಹೆಚ್ಚು ಜನರನ್ನು ಐಸೋಲೇಷನ್‍ ನಲ್ಲಿ ಇಡಲಾಗಿದೆ. ಒಟ್ಟು 362 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 256 ಸ್ಯಾಂಪಲ್ ನೆಗೆಟಿವ್ ಬಂದಿವೆ, 10 ಪಾಸಿಟಿವ್ ಬಂದಿವೆ. ಅಲ್ಲದೆ ಇನ್ನೂ 96 ಪ್ರಕರಣಗಳ ಕುರಿತು ಫಲಿತಾಂಶ ಬರಬೇಕಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಇಂದು ಮತ್ತೆ 60 ಸ್ಯಾಂಪಲ್ ಕಲೆಕ್ಟ್ ಮಾಡಿ ಪರೀಕ್ಷೆಗೆ ಕಳುಹಿಸಲಾಗುವದು. ಇಂದಿನ ಮೂರು ಪಾಸಿಟಿವ್ ವರದಿಗಳ ಪ್ರಕಾರ ಮೊದಲಿನ ಎರಡು ಪ್ರಕರಣಗಳು ರೋಗಿ ನಂ.221 ಗೆ ಸಂಬಂಧಿಸಿದ್ದು. ಸಂಜೆ ಬಂದ 228 ಜನರ ವರದಿಗೆ ಸಂಬಂಧಿಸಿದಂತೆ ಒಂದು ಪಾಜಿಟಿವ್ ಬಂದಿದೆ ಎಂದರು.

ಪುಣೆಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಂಪರ್ಕದಿಂದಾಗಿ 228ನೇ ರೋಗಿಗೆ ಸೋಂಕು ತಗುಲಿದೆ. ಇವರ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಇಲ್ಲಿಯ ವರೆಗೆ ಈ ಎರಡು ಕುಟುಂಬಗಳಲ್ಲಿ ಮಾತ್ರ ಪಾಸಿಟಿವ್ ಬರುತ್ತಿದೆ. ಅವರೊಂದಿಗಿದ್ದವರಿಗೆ ಬಂದಿಲ್ಲ ಎಂಬುದು ಸಂತೋಷದ ವಿಚಾರ ಎಂದರು.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ