Breaking News

ಗಣೇಶನ ಮೂರ್ತಿ ತರಲು ಹೋಗುತ್ತಿದ್ದಾಗ ಬೈಕ್ ಅಪಘಾತ – ಸವಾರ ದುರ್ಮರಣ

Spread the love

ಕಲಬುರಗಿ: ಗಣೇಶನ ಮೂರ್ತಿ  ತರಲು ಹೋಗುತ್ತಿರುವಾಗ ಬೈಕ್ ಅಪಘಾತವಾಗಿ ಸವಾರ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಕಲಬುರಗಿ ನಗರದ ಹೀರಾಪುರ ರಸ್ತೆಯ ಫ್ಲೈ ಓವರ್ ಮೇಲೆ ನಡೆದಿದೆ.

ಕೊಟನೂರು ಬಡಾವಣೆಯ ಪ್ರಶಾಂತ್ ಬಿರಾದರ್ (23) ಮೃತ ಯುವಕ. ಕಳೆದ ರಾತ್ರಿ ಸ್ನೇಹಿತರೊಡನೆ ಗಣೇಶ ಮೂರ್ತಿ ತರಲು ಹೋಗುತ್ತಿದ್ದರು. ಈ ವೇಳೆ ಪಕ್ಕದ ಬೈಕ್ ಟಚ್ ಆಗಿ ಕೆಳಗೆ ಬಿದ್ದು ಇಬ್ಬರು ಸವಾರರ ತಲೆಗೆ ಗಂಭೀರ ಗಾಯವಾಗಿದೆ.

ಇಬ್ಬರ ಪೈಕಿ ಪ್ರಶಾಂತ್ ಬಿರಾದರ್ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಗಂಡನಿಂದ ಪತ್ನಿಗೆ ಗುಂಡು, ಬಳಿಕ ತಾನೂ ಶೂಟ್ ಮಾಡಿಕೊಂಡ ವೃದ್ಧ!

Spread the loveಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಂಬಾರಗಡಿಗೆ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವೃದ್ಧ ದಂಪತಿ ಗುಂಡೇಟಿಗೆ ಬಲಿಯಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ