ಶಿವಮೊಗ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಆಯನೂರು ಸಮೀಪದ ವೀರಗಾರನಬೈರನಕೊಪ್ಪ ಬಳಿ ನಡೆದಿದೆ.
ಬೆಳಗಿನ ಜಾವ ಘಟನೆ ನಡೆದಿದ್ದು, ಶಿವಮೊಗ್ಗ ನಗರದ ಗಾಡಿಕೊಪ್ಪದ ನಿವಾಸಿ ವೀರೇಶ್ (28) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದಲ್ಲಿ ಖಾಸಗಿ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ವೀರೇಶ್ ಸೋಮವಾರ ಬೆಳಗ್ಗಿನ ಜಾವ ಬೈಕ್‌ನಲ್ಲಿ ಬೆಂಗಳೂರು- ಹೊನ್ನಾವರ ಎನ್‌ಹೆಚ್-206ರಲ್ಲಿ ಶಿವಮೊಗ್ಗದತ್ತ ಬರುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ.
ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿದ್ದ ವೀರೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೀರೇಶ್ ಮೃತದೇಹ ಮೆಗ್ಗಾನ್ ಶವಾಗಾರಕ್ಕೆ ರವಾನಿಸಲಾಗಿದ್ದು, ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7