Breaking News
Home / ಜಿಲ್ಲೆ / ಕೋಲಾರ / ಗ್ಯಾಸ್ ಏಜೆನ್ಸಿ ಮಾಲೀಕ ಪೊಲೀಸರು, ಪೌರ ಕಾರ್ಮಿಕರಿಗೆ ಬಿರಿಯಾನಿ ಊಟ ನೀಡುತ್ತಿದ್ದಾರೆ

ಗ್ಯಾಸ್ ಏಜೆನ್ಸಿ ಮಾಲೀಕ ಪೊಲೀಸರು, ಪೌರ ಕಾರ್ಮಿಕರಿಗೆ ಬಿರಿಯಾನಿ ಊಟ ನೀಡುತ್ತಿದ್ದಾರೆ

Spread the love

ಕೋಲಾರ: ಕೊರೊನಾ ಮಹಾಮಾರಿ ಆವರಿಸಿದ್ದರಿಂದ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದ್ದು, ಕಳೆದ 21 ದಿನಗಳಿಂದ ನಮ್ಮನ್ನು ಕಾಯುತ್ತಿರುವ ಕೊರೊನಾ ವಾರಿಯರ್ಸ್ ಪೊಲೀಸ್ ಸಿಬ್ಬಂದಿಗೆ ಕೋಲಾರದಲ್ಲಿ ಬಿರಿಯಾನಿ ವಿತರಣೆ ಮಾಡಲಾಯಿತು.

ಕೋಲಾರದ ರೇವತಿ ಭಾರತ್ ಗ್ಯಾಸ್ ಏಜೆನ್ಸಿ ಮಾಲೀಕರಿಂದ ವಾರಕ್ಕೊಮ್ಮೆ ಬಿರಿಯಾನಿ ವಿತರಣೆ ಮಾಡಲಾಗುತ್ತಿದೆ. ಕೋಲಾರ ನಗರ ಹಾಗೂ ಬಂಗಾರಪೇಟೆ ಪಟ್ಟಣದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ನಗರಸಭೆ ಸಿಬ್ಬಂದಿಗೆ ಬಿರಿಯಾನಿ ವಿತರಣೆ ಮಾಡಲಾಯಿತು.

ಕಳೆದ ಬುಧವಾರವೂ ಹೀಗೆ ಕರ್ತವ್ಯದಲ್ಲಿದ್ದ ನೂರಾರು ಪೊಲೀಸರಿಗೆ ಬಿರಿಯಾನಿ ಮಾಡಿ, ಅದನ್ನು ಪ್ಯಾಕ್ ಮಾಡಿ ವಿತರಣೆ ಮಾಡಲಾಗಿತ್ತು. ಇಂದು ಕೂಡ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಬಿರಿಯಾನಿ ವಿತರಣೆ ಮಾಡಿ ಗ್ಯಾಸ್ ಏಜೆನ್ಸಿ ಮಾಲೀಕರು ಮಾನವೀಯತೆ ಮೆರೆದಿದ್ದಾರೆ. ಕೇವಲ ಪೊಲೀಸರಿಗೆ ಮಾತ್ರವಲ್ಲ ಪೌರ ಕಾರ್ಮಿಕರಿಗೂ ಬಿರಿಯಾನಿ ವಿತರಿಸಿ ಸಾರ್ಥಕತೆ ಮೆರೆದಿದ್ದಾರೆ. ಈ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.


Spread the love

About Laxminews 24x7

Check Also

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿ

Spread the love ಬೆಂಗಳೂರು: ನಿರೀಕ್ಷೆಯಂತೆ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ನಿವೃತ್ತ ಐಎಎಸ್ ಅಧಿಕಾರಿ ಎ.ಎಸ್. ಪುಟ್ಟಸ್ವಾಮಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ