Breaking News

ಸತೀಶ್ ಕಡತನಮಲೆಗೆ ಶಾಕ್ – ಬಿಜೆಪಿಯಿಂದ 6 ವರ್ಷ ಉಚ್ಚಾಟನೆ

Spread the love

ಬೆಂಗಳೂರು: ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಬಮೂಲ್ ನಿರ್ದೇಶಕ ಸತೀಶ್ ಕಡತನಮಲೆ  ಅವರನ್ನು ಭಾರತೀಯ ಜನತಾ ಪಾರ್ಟಿ  ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ.

ಪಕ್ಷ ವಿರೋಧಿ ಚಟುವಟಿಕೆ ಹಾಗೂ ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ ಪಾಟೀಲ್ ಅವರು ಉಚ್ಚಾಟಿಸಿ ಆದೇಶ ಪ್ರಕಟಿಸಿದ್ದಾರೆ.

ಉಚ್ಚಾಟಿಸಿದ್ದು ಯಾಕೆ?
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿದಂತೆ ಸ್ಥಳೀಯ ಪ್ರಮುಖ ಬಿಜೆಪಿ ನಾಯಕರ ವಿರುದ್ಧ ಸತೀಶ್ ಕಡತನಮಲೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಪದೇಪದೇ ಸುದ್ದಿಗೋಷ್ಠಿಗಳನ್ನು ನಡೆಸುವ ಮೂಲಕ ಮಾಧ್ಯಮಗಳ ಮುಂದೆ ಪಕ್ಷ ಮತ್ತು ನಾಯಕರ ವಿರುದ್ಧ ಹೇಳಿಕೆ ನೀಡಿ ಮುಜುಗರ ಉಂಟುಮಾಡಿದ್ದರು.

ಸತೀಶ್ ಕಡತನಮಲೆ ಅವರು ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರಿಗೆ ಅತ್ಯಂತ ಆಪ್ತರಾಗಿದ್ದರೂ, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರೊಂದಿಗೂ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಇದು ಸ್ಥಳೀಯ ಬಿಜೆಪಿ ನಾಯಕರ ಕೆಣ್ಣಿಗೆ ಗುರಿಯಾಗಿತ್ತು.

ಸತೀಶ್ ಅವರ ನಡವಳಿಕೆ ಕುರಿತು ಸ್ಥಳೀಯ ಮುಖಂಡರು ರಾಜ್ಯ ಶಿಸ್ತು ಸಮಿತಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷವು ಅವರಿಗೆ ನೋಟಿಸ್ ನೀಡಿ ಸ್ಪಷ್ಟೀಕರಣ ಕೇಳಿತ್ತು. ಆದರೆ ಸತೀಶ್ ಕಡತನಮಲೆ ಅವರು ನೀಡಿದ ಸ್ಪಷ್ಟೀಕರಣವು ಸಮಂಜಸ ಹಾಗೂ ತೃಪ್ತಿಕರವಾಗಿಲ್ಲದ ಕಾರಣ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಆದೇಶದಲ್ಲಿ ತಿಳಿಸಿದೆ.

Spread the love

About Laxminews 24x7

Check Also

ಸಾರಿಗೆ ನೌಕರರಿಗೆ ಸಿಹಿ ಸುದ್ದಿ – ಈ ತಿಂಗಳಿನಿಂದಲೇ ಅಕೌಂಟ್‌ಗೆ ಪರಿಷ್ಕೃತ ವೇತನ ಜಮೆ

Spread the loveಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ