Breaking News

25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಬಿಜೆಪಿ ನಾಯಕನ ಪುತ್ರ ಅರೆಸ್ಟ್

Spread the love

ಪಣಜಿ: 25 ರಿಂದ 30 ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಕ್ಕೆ ಸಂಬಂಧಿಸಿ ದಕ್ಷಿಣ ಗೋವಾ ಪೊಲೀಸರು ಬಿಜೆಪಿ  ನಾಯಕನೋರ್ವನ ಪುತ್ರನನ್ನು ಬಂಧಿಸಿದ್ದಾರೆ.

ಮಡೆಗಲ್-ಕಾಕೋರಾದ ನಿವಾಸಿ ಮತ್ತು ಕರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಪುತ್ರ ಸೋಹಮ್ ನಾಯಕ್ ಬಂಧಿತ ಆರೋಪಿಯಾಗಿದ್ದು, ಪೋಕ್ಸೋ ಕೇಸ್‌ ದಾಖಲಾಗಿದೆ.

ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಆರೋಪಿಯನ್ನು ಬಂಧಿಸಲಾಗಿದೆ. ತನಿಖೆಯ ವೇಳೆ ಆರೋಪಿ ಕಳೆದ ಮೂರು ವರ್ಷಗಳಿಂದ ಅಪ್ರಾಪ್ತ ಬಾಲಕಿಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ತನ್ನ ಕೃತ್ಯದ ವಿಡಿಯೋ ಮಾಡಿ, ಬಳಿಕ ಬ್ಲಾಕ್‌ಮೇಲ್ ಮಾಡುತ್ತಿದ್ದ ಎನ್ನುವುದು ಬಹಿರಂಗವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಗೋವಾ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಪಾಟ್ಕರ್, ಸರ್ಕಾರ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಕಳೆದ ವಾರ ಪಾರ್ಟಿಯೊಂದರಲ್ಲಿ ಆರೋಪಿ ತನ್ನ ಸ್ನೇಹಿತರಿಗೆ ಕೃತ್ಯದ ಬಗ್ಗೆ ಹೇಳುತ್ತಾ ವಿಡಿಯೋ ತೋರಿಸಿದ ಬಳಿಕ ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ಬಹಿರಂಗಗೊಂಡಿತ್ತು.


Spread the love

About Laxminews 24x7

Check Also

ಪಾಲಿಕೆಯಲ್ಲಿ ಕರ್ನಾಟಕ ಪರ ಗೋತ್ತುವಳಿ ಮಂಡನೆಗೆ ಆಗ್ರಹಿಸಿ 101 ಈಡುಗಾಯಿ ಒಡೆದು ಪ್ರತಿಭಟನೆ

Spread the loveಬೆಳಗಾವಿ: ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಲು ಆಗ್ರಹಿಸಿ ಕಳೆದ ನೂರು ದಿನಗಳಿಂದ ನಡೆದ ಕನ್ನಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ