ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಹೋರಾಟ ಮುಂದುವರೆಸಿದ್ದರಿಂದ ವಿಧಾನಮಂಡಲದ ಕಲಾಪವನ್ನು ಮೂರು ದಿನಗಳ ಮೊದಲೇ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ.
ಒಂದು ವಾರದಿಂದ ಸದನದ ಒಳಗೆ-ಹೊರಗೆ ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ ಇಂದಿನಿಂದ ಅಹೋರಾತ್ರಿ ಧರಣಿಗೆ ಮುಂದಾಗಿತ್ತು. ಆದರೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಇದಕ್ಕೂ ಮುನ್ನ ನಾಗೇಂದ್ರ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಿತ್ತು. ಒಂದು ತಂಡ ಅಶೋಕ್-ವಿಜಯೇಂದ್ರ ನೇತೃತ್ವದಲ್ಲಿ ವಿಕಾಸಸೌಧದ ಪ್ರವೇಶ ದ್ವಾರದ ಬಳಿ ನಾಗೇಂದ್ರ ವಿರುದ್ಧ ಪ್ಲೇಕಾರ್ಡ್ ಪ್ರದರ್ಶಿಸಿ ವಿಧಾನಸೌಧಕ್ಕೆ ನುಗ್ಗಲು ಮುಂದಾಯಿತು. ಇದಕ್ಕೆ ಅವಕಾಶ ಕೊಡದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು.
ಇನ್ನೊಂದು ಕಡೆ, ಛಲವಾದಿ ನಾರಾಯಣಸ್ವಾಮಿ, ಅಶ್ವಥ್ ನಾರಾಯಣ್, ಶ್ರೀರಾಮುಲು ನೇತೃತ್ವದಲ್ಲಿ ಫ್ರೀಡಂಪಾರ್ಕ್ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಕದಲದಂತೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು. ಈ ಮಧ್ಯೆ ನಾಗೇಂದ್ರ ವಿರುದ್ಧ ಸಿಬಿಐ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದು, ಕ್ಯಾಬಿನೆಟ್ ಸಲಹೆಯನ್ನು ರಾಜ್ಯಪಾಲರು ಕೇಳಿದ್ದಾರೆ. ಮತ್ತೊಂದೆಡೆ, ಕಳಂಕಿತ ಸಚಿವ ನಾಗೇಂದ್ರ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಿದೆ.
Laxmi News 24×7