Breaking News

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Spread the love

ಬೆಂಗಳೂರು: ವಿಧಾನ ಪರಿಷತ್‌ ಖಾಲಿ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.

ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶಶೀಲ್‌ ಜಿ.ನಮೋಜಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಎಸ್‌.ವಿ.ಸಂಕನೂರ ಮತ್ತು ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕೆ.ಎಂ.ಸುರೇಶ್‌ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ.

ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಆಪ್ತನಾಗಿದ್ದ ಕೆ.ಎಂ.ಸುರೇಶ್ ಮೂರು ದಶಕಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.

ಹಾಲಿ ಎಂಎಲ್ಸಿ ಶಶೀಲ್ ನಮೋಶಿ ಅವರನ್ನು ಮತ್ತೆ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪಕ್ಷ ಅಧಿಕೃತವಾಗಿ ಘೋಷಣೆ ಮಾಡಿದೆ. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ವ್ಯಾಪ್ತಿಗೆ ಒಳಪಡುವ ಈಶಾನ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ಈ ಕ್ಷೇತ್ರದಲ್ಲಿ ಮೇಲ್ಕಂಡ ಏಳು ಜಿಲ್ಲೆಗಳಲ್ಲಿನ ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತದಾರರಾಗಿ ನೋಂದಾಯಿಸಿಕೊಂಡು ಚುನಾವಣೆಯಲ್ಲಿ ಮತ ಚಲಾಯಿಸುವ ಮೂಲಕ ವಿಧಾನ ಪರಿಷತ್‌ಗೆ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡುತ್ತಾರೆ.


Spread the love

About Laxminews 24x7

Check Also

15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಕ್ರಮ : ಮಧು ಬಂಗಾರಪ್ಪ

Spread the loveಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಕ್ರಮ ವಹಿಸಲಾಗುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ