Breaking News

ಕೇಂದ್ರ ಸಚಿವ ಹೆಚ್‌ಡಿಕೆ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

Spread the love

ಬೆಂಗಳೂರು: ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಅವರಿಂದು (ಜು.10) ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ  ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಭೇಟಿಯಾದ ಅವರು ರಾಜ್ಯ ರಾಜಕೀಯದ ಪ್ರಚಲಿತ ವಿದ್ಯಮಾನಗಳ ಕುರಿತು ಸಮಗ್ರವಾಗಿ ಚರ್ಚಿಸಿದ್ದಾರೆ.

ಇದೇ ವೇಳೆ ರೈತವಿರೋಧಿ, ಜನವಿರೋಧಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂದಿನ ಹೋರಾಟದ ರೂಪುರೇಷೆಗಳು, ಮುಂಬರುವ ಚುನಾವಣಾ ಸವಾಲುಗಳನ್ನು ಮತ್ತಷ್ಟು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಎರಡೂ ಪಕ್ಷಗಳ ಮೈತ್ರಿಯನ್ನು ಬಲಪಡಿಸಿ, ಒಂದಾಗಿ ಮುನ್ನಡೆಯುವ ನಿಟ್ಟಿನಲ್ಲಿ ಸುದೀರ್ಘವಾಗಿ ಸಮಾಲೋಚನೆ ನಡೆಸಿದ್ದಾರೆ. ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ರೇಷ್ಮೆ ಉತ್ಪಾದನೆಯಲ್ಲಿ ಭಾರತ ಅಗ್ರಸ್ಥಾನಕ್ಕೇರಲಿ: ಗೋವಿಂದ ಕಾರಜೋಳ

Spread the loveಚಿತ್ರದುರ್ಗ: ವಿಶ್ವದ ರೇಷ್ಮೆ ಉತ್ಪಾದನೆಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ನಮ್ಮ ದೇಶದಲ್ಲಿ ಕರ್ನಾಟಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ