Breaking News
????????????????????????????????????

ಬಿಜೆಪಿಯಿಂದ ಮಾತ್ರ ರೈತರ ಏಳ್ಗೆ ಸಾಧ್ಯ-ಸಂಸದ ಈರಣ್ಣ ಕಡಾಡಿ

Spread the love

ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವಾರು ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಬಿಜೆಪಿಯಿಂದ ಮಾತ್ರವೇ ರೈತರ ಏಳ್ಗೆ ಸಾಧ್ಯವೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

 

????????????????????????????????????

ಶುಕ್ರವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣೆ ನಿಮಿತ್ಯ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇತ್ತಿಚೆಗೆ ಕೃಷಿ ಮಸೂದೆಗಳನ್ನು ಅಂಗೀಕರಿಸಿದ್ದು, ರೈತರಿಗೆ ಮಸೂದೆ ಪೂರಕವಾಗಿವೆ ಎಂದು ಹೇಳಿದರು.
ರೈತರಿಗೆ ಆರ್ಥಿಕವಾಗಿ ಅನುಕೂಲವಾಗುವ ಸದ್ದುದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ. ಆದರೆ ರೈತರ ಹಿತವನ್ನು ಬಯಸದ ವಿರೋಧ ಪಕ್ಷಗಳು ರಾಜಕೀಯ ದುರುದ್ದೇಶದಿಂದ ನೂತನ ಕೃಷಿ ಮಸೂದೆಯನ್ನು ವಿರೋಧಿಸುತ್ತಿರುವುದು ಸರಿಯಲ್ಲ. ದೇಶದಲ್ಲಿ ಶೇಕಡಾ 40ರಷ್ಟು ಕೃಷಿಯನ್ನೇ ಅವಲಂಭಿತವಾಗಿರುವ ರೈತರ ಹಿತಕ್ಕೆ ಧಕ್ಕೆ ಬರದಂತೆ ಅವರಿಗೆ ಹೆಚ್ಚಿನ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಮಹತ್ತರ ಮಸೂದೆಯನ್ನು ಅಂಗೀಕರಿಸಿದೆ. ಈ ಹಿಂದೆ ಯಾವ ಸರ್ಕಾರಗಳು ಮಾಡದ ಅಭಿವೃದ್ದಿ ಕಾರ್ಯಗಳನ್ನು ನರೇಂದ್ರ ಮೋದಿ ಅವರು ಮಾಡುತ್ತಿದ್ದಾರೆ. ಭಾರತ ಜಗತ್ತಿನ ಶಕ್ತಿಶಾಲಿ ರಾಷ್ಟ್ರವಾಗಲು ಮೋದಿ ಅವರು ಜಾರಿಗೊಳಿಸಿರುವ ಹಲವಾರು ಉತ್ತಮ ಕಾರ್ಯಕ್ರಮಗಳೇ ಇದಕ್ಕೆ ಸಾಕ್ಷಿಯಾಗಿದೆ. ಜನಪರ ಹಾಗೂ ರೈತ ಪರ ಯೋಜನೆಗಳನ್ನು ಹಮ್ಮಿಕೊಂಡಿರುವುದು ಸರ್ಕಾರದ ದೂರದೃಷ್ಟಿಗೆ ಸಾಕ್ಷಿಕರಿಸಿದೆ ಎಂದು ತಿಳಿಸಿದರು.
ಪ್ರಧಾನಿ ಅವರಿಂದು ಕಿಸಾನ್ ಸಮ್ಮಾನ ಯೋಜನೆಯಡಿ 9 ಕೋಟಿ ರೈತ ಕುಟುಂಬಗಳಿಗೆ 18ಸಾವಿರ ಕೋಟಿ ರೂ.ಗಳನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಿದ್ದಾರೆ. ಇದೊಂದು ಐತಿಹಾಸಿಕ ಸಾಧನೆಯಾಗಿದೆ. ಅಜಾತ ಶತ್ರು ಹಾಗೂ ಭಾರತ ಕಂಡಿರುವ ಸರ್ವಶ್ರೇಷ್ಠ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯ ಶುಭ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ರೈತರಿಗೆ ಅನುಕೂಲ ಕಲ್ಪಿಸಿಕೊಟ್ಟಿದ್ದಾರೆ. ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪನವರ ನೇತ್ರತ್ವದ ಬಿಜೆಪಿ ಸರ್ಕಾರ ರೈತರಿಗೆ ಬಡ್ಡಿ ರಹಿತ ಸಾಲವನ್ನು ನೀಡುತ್ತಿದೆ. ಕೃಷಿಕರ ಬಾಳು ಹಸನಾಗಲು ನೇಗಿಲಯೋಗಿ ಯಡಿಯೂರಪ್ಪನವರು ರಾಜ್ಯದಲ್ಲಿ ಅನೇಕ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆಂದು ಕಡಾಡಿ ಅವರು ಹೇಳಿದರು.
ಅಧ್ಯಕ್ಷತೆಯನ್ನು ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ ವಹಿಸಿದ್ದರು.
ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಶ ಪಾಟೀಲ, ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಬಾಳಿಕಾಯಿ, ಮಂಡಲ ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಈರಣ್ಣ ಅಂಗಡಿ, ಬಿಜೆಪಿ ವಿವಿಧ ಮೋರ್ಚಾಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ರೈತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ ನಿರೂಪಿಸಿ ವಂದಿಸಿದರು.
ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಕಿಸಾನ್ ಸಮ್ಮಾನ್ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ರೈತರನ್ನುದ್ದೇಶಿಸಿ ಮಾತನಾಡುತ್ತಿರುವ ವರ್ಚುವಲ್ ನೇರ ಪ್ರಸಾರವನ್ನು ವೀಕ್ಷಿಸಲು ಕಾರ್ಯಕರ್ತರಿಗೆ ಬೃಹತ ಎಲ್‍ಇಡಿ ಪರದೆಯನ್ನು ಅಳವಡಿಸಲಾಗಿತ್ತು.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ