Breaking News

ಆಟಕ್ಕುಂಟು-ಲೆಕ್ಕಕ್ಕಿಲ್ಲ ಇದೇನು ವಿಪರ್ಯಾಸವೇ? ಕಟು ಸತ್ಯವೇ? ಈಗ ಸ್ಪಷ್ಟ ಹೇಳುವುದಿಷ್ಟೇ. ಕಾಲಾಯ ತಸ್ಮೈಯ್ ನಮಃ. :ಆನಂದ್ ಮಾಮನಿ

Spread the love

ಬೆಂಗಳೂರು, ಫೆ.4- ಆಟಕ್ಕುಂಟು-ಲೆಕ್ಕಕ್ಕಿಲ್ಲ ಇದೇನು ವಿಪರ್ಯಾಸವೇ? ಕಟು ಸತ್ಯವೇ? ಈಗ ಸ್ಪಷ್ಟ ಹೇಳುವುದಿಷ್ಟೇ. ಕಾಲಾಯ ತಸ್ಮೈಯ್ ನಮಃ. ಬೆಳಗಾವಿ ಜಿಲ್ಲೆ ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಮಾಮನಿ ಮಾಡಿರುವ ಟ್ವೀಟ್ ಇದು. ಪಕ್ಷದ ನಿಷ್ಠಾವಂತರನ್ನು ಕಡೆಗಣಿಸಿ ಕೆಲವರಿಗೆ ಮಣೆ ಹಾಕುತ್ತಿರುವುದಕ್ಕೆ ಅಸಮಾಧಾನ ವ್ಯಕ್ತವಾಗುತ್ತಿದೆ.mla#

ಇದೇ ಸಂದರ್ಭದಲ್ಲಿ ಆನಂದ್ ಮಾಮನಿ ಮಾಡಿರುವ ಈ ಟ್ವೀಟ್ ಸಾಕಷ್ಟು ಗೂಡಾರ್ಥವನ್ನು ನೀಡಿದೆ. ಸಾಮಾನ್ಯವಾಗಿ ಎಂದೂ ಬಹಿರಂಗವಾಗಿ ಮಾತನಾಡದೆ ಪಕ್ಷದ ಚೌಕಟ್ಟಿನಲ್ಲೇ ಇರುವ ಆನಂದ್ ಮಾಮನಿ ಇದೇ ಮೊದಲ ಬಾರಿಗೆ ಈ ರೀತಿ ಟ್ವೀಟ್ ಮಾಡಿರುವುದು ಆಡಳಿತಾರೂಢ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಬಿಂಬಿಸುತ್ತಿದೆ.

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸಂಪುಟ ಸೇರ್ಪಡೆಗೆ ವಿರೋಧ ವ್ಯಕ್ತವಾಗುತ್ತಿದೆ. ಇಂತಹ ಸಂದರ್ಭದಲ್ಲೇ ಆನಂದ್ ಮಾಮನಿ ಟ್ವೀಟ್ ಹಲವು ಸಂಶಯಗಳನ್ನು ಹುಟ್ಟುಹಾಕಿದೆ.
ಹಿರಿಯರನ್ನು ಕಡೆಗಣಿಸಿ ವಲಸೆ ಮತ್ತು ಸೋತವರಿಗೆ ಸಂಪುಟದಲ್ಲಿ ಸ್ಥಾನಮಾನ ನೀಡುತ್ತಿರುವುದು ಬಿಜೆಪಿಯ ನಿಷ್ಠಾವಂತರ ಕಣ್ಣು ಕೆಂಪಾಗುವಂತೆ ಮಾಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ