Breaking News
Home / ಜಿಲ್ಲೆ / ರಾಜ್ಯ ಬಿಜೆಪಿಯಲ್ಲಿ ಏನಾಗ್ತಿದೆ. ಲಿಂಗಾಯತ ಶಾಸಕರ ಸೀಕ್ರೆಟ್ ಮೀಟಿಂಗ್..

ರಾಜ್ಯ ಬಿಜೆಪಿಯಲ್ಲಿ ಏನಾಗ್ತಿದೆ. ಲಿಂಗಾಯತ ಶಾಸಕರ ಸೀಕ್ರೆಟ್ ಮೀಟಿಂಗ್..

Spread the love

ರಾಜ್ಯ ಬಿಜೆಪಿಯಲ್ಲಿ ಏನಾಗ್ತಿದೆ..? ತಡರಾತ್ರಿ ಪಂಚಮಸಾಲಿ ಲಿಂಗಾಯತ ಶಾಸಕರ ಸೀಕ್ರೆಟ್ ಮೀಟಿಂಗ್..

ಬೆಂಗಳೂರು, ಫೆ.19-ಪಂಚಮಸಾಲಿ ಲಿಂಗಾಯತ ಸಮುದಾಯದ ಬಿಜೆಪಿ ಶಾಸಕರಿಂದ ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆದಿದೆ.ಪಂಚಮಸಾಲಿ ಲಿಂಗಾಯತ ಸಮುದಾಯದ ಬಿಜೆಪಿ ಶಾಸಕರಿಂದ ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಕರಡಿ ಸಂಗಣ್ಣ, ನಿಂಬಣ್ಣವರ್, ಮಹೇಶ್ ಕುಮಟಳ್ಳಿ, ಮೋಹನ್ ಲಿಂಬಿಕಾಯಿ ಹಾಗೂ ಮುರುಗೇಶ್ ನಿರಾಣಿ ಭಾಗವಹಿಸಿದ್ದರು.

ನಿನ್ನೆ ರಾತ್ರಿ ಅವರ ನೇತೃತ್ವದಲ್ಲಿ ನಡೆದಿರುವ ಬಿಜೆಪಿಯ ಅತೃಪ್ತ ಶಾಸಕರ ಸಭೆಯಲ್ಲಿ ಸಿಎಂ ಯಡಿಯೂರಪ್ಪನವರ ಬಗ್ಗೆ ಅಸಮಾಧಾನ ಹೊರಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಬಿಜೆಪಿಯಲ್ಲಿ ಇನ್ನೂ ಗೊಂದಲ, ಭಿನ್ನಮತ ಬಗೆಹರಿದಿಲ್ಲ ಎಂಬುದು ಸಾಬೀತಾದಂತಾಗಿದೆ.

ಈ ಸಭೆಯಲ್ಲಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಪಂಚಮಸಾಲಿ ಸಮುದಾಯದ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಸಿಎಂಗೆ ಒತ್ತಾಯಿಸುವ ಕುರಿತಂತೆ ಚರ್ಚೆ ನಡೆದಿದೆ ಎನ್ನಲಾಗಿದೆ. ಪಂಚಮಸಾಲಿ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಕರಡಿ ಸಂಗಣ್ಣ, ಸಿ.ಎಂ. ನಿಂಬಣ್ಣವರ್, ಮಹೇಶ್ ಕುಮಟಳ್ಳಿ, ಮೋಹನ್ ಲಿಂಬಿಕಾಯಿ, ಸಿದ್ದು ಸವದಿ, ಶಂಕರ ಪಾಟೀಲ್ ಮುನೇನಕೊಪ್ಪ, ಅರವಿಂದ ಬೆಲ್ಲದ್, ಆನಂದ್ ಮಾಮವಿ, ಮಹಾಂತೇಶ ದೊಡ್ಡಗೌಡರ, ಶಶಿಕಾಂತ ನಾಯಕ, ಅರುಣ್ ಕುಮಾರ್ ಪೂಜಾರ್, ಸಂಗಣ್ಣ ಕರಡಿ ಹಾಗೂ ಮುರುಗೇಶ್ ನಿರಾಣಿ ಉಪಸ್ಥಿತರಿದ್ದರು. ಪಂಚಮಸಾಲಿ ಸಮುದಾಯದ ಇಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಸಿಎಂ ಯಡಿಯೂರಪ್ಪಗೆ ಒತ್ತಾಯಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕೇಂದ್ರ ಓಬಿಸಿ ಮೀಸಲಾತಿಯಲ್ಲಿ ಸೇರ್ಪಡೆಗೆ ಮನವಿ ಮಾಡಲು ಕೇಂದ್ರ ಹಿಂದುಳಿದ ವರ್ಗಗಳ ಸಚಿವರ ಭೇಟಿಗೂ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆಯಂತೆ, ಹಾಗೂ ಜೂನ್‍ನಲ್ಲಿ ಪರಿಷತ್‍ಗೆ ಮೋಹನ್ ಲಿಂಬಿಕಾಯಿ ಪರಿಗಣಿಸುವಂತೆ ಮನವಿಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ರಾಜ್ಯ ಸರ್ಕಾರದ ಸಂಪುಟದಲ್ಲಿ ಪಂಚಮಸಾಲಿ ಸಮುದಾಯವನ್ನು ನಿರ್ಲಕ್ಷ್ಯ ಮಾಡುತ್ತಿರುವುದಕ್ಕೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಪುಟ ವಿಸ್ತರಣೆ ವೇಳೆ ವಲಸಿಗ ಶಾಸಕರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಮೂಲ ಬಿಜೆಪಿ ಶಾಸಕರು ಸಚಿವ ಮನೆಯಲ್ಲಿ ಸೋಮವಾರ ಸಭೆ ನಡೆಸಿದ್ದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗಿತ್ತು.

ಸಚಿವ ಸ್ಥಾನ ನೀಡುವಾಗ ಪ್ರದೇಶವಾರು, ಜಾತಿವಾರು ಮನ್ನಣೆ ನೀಡಿಲ್ಲ ಎಂಬ ಕಾರಣಕ್ಕೆ ಉಮೇಶ್ ಕತ್ತಿ, ಮುರುಗೇಶ ನಿರಾಣಿ, ರಾಜೂಗೌಡ, ಎ.ಎಸ್. ಪಾಟೀಲ್, ಬಸನಗೌಡ ಪಾಟೀಲ ಯತ್ನಾಳ್ ಸೇರಿದಂತೆ ಇನ್ನೂ ಕೆಲವು ಶಾಸಕರು ಸಚಿವ ಜಗದೀಶ್ ಶೆಟ್ಟರ್ ಮನೆಯಲ್ಲಿ ಸಭೆ ನಡೆಸಿದ್ದರು.

ಈ ಸಭೆಯ ಕುರಿತು ವರದಿ ನೀಡುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಗುಪ್ತಚರ ಇಲಾಖೆಗೆ ಸೂಚನೆ ನೀಡಿದ್ದರು.ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿದ್ದ , ಬಿಜೆಪಿಯ ಕೆಲವು ಶಾಸಕರು ತಮ್ಮ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಚರ್ಚಿಸಲು ಬಂದಿದ್ದರು. ಯಾವುದೇ ಸಚಿವ ಸ್ಥಾನದ ಬಗ್ಗೆ ಸಭೆಯಲ್ಲಿ ಮಾತಾಡಿಲ್ಲ. ಯಡಿಯೂರಪ್ಪನವರ ಮಗ ವಿಜಯೇಂದ್ರ ಬಗ್ಗೆಯೂ ಭಿನ್ನಾಭಿಪ್ರಾಯ ವ್ಯಕ್ತಪಡಿಸಿಲ್ಲ. ಇದು ಅನೌಪಚಾರಿಕವಾಗಿ ನಡೆದ ಸಭೆ ಎಂದು ಹೇಳಿದ್ದರು.


Spread the love

About Laxminews 24x7

Check Also

ಇಂದು, ನಾಳೆ ಬೆಂಗಳೂರಿನಲ್ಲಿ ಅಮಿತ್‌ ಶಾ, ಯೋಗಿ ರೋಡ್‌ ಶೋ

Spread the loveಬೆಂಗಳೂರು: ಮೊದಲನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ದಿನಗಣನೆ ಪ್ರಾರಂಭವಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ