Breaking News
Home / ಜಿಲ್ಲೆ / ಕೊರೊನಾಗೆ ರಾಮಬಾಣವಾಗಿ ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಇಂದು ಅಧಿಕೃತ ಚಾಲನೆ

ಕೊರೊನಾಗೆ ರಾಮಬಾಣವಾಗಿ ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಇಂದು ಅಧಿಕೃತ ಚಾಲನೆ

Spread the love

ಬೆಂಗಳೂರು: ಕೊರೊನಾಗೆ ರಾಮಬಾಣವಾಗಿ ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಇಂದು ಅಧಿಕೃತ ಚಾಲನೆ ನೀಡಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಚಲನೆ ನೀಡಿದರು. ಕರೊನಾ ಮಹಾಮಾರಿ ಗುಣಪಡಿಸುವ ಮಹತ್ವದ ಚಿಕಿತ್ಸೆ ಇದಾಗಿದೆ.

ಕೇಂದ್ರ ಸರಕಾರದ ಅನುಮತಿಯೊಂದಿಗೆ ಕರ್ನಾಟಕದಲ್ಲಿ ಈಗ ಪ್ರಾಯೋಗಿಕವಾಗಿ ಈ ಚಿಕಿತ್ಸೆ ಆರಂಭವಾಗಿದ್ದು, ಕೊರೊನಾಗೆ ಪರಿಣಾಮಕಾರಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡವರ ದೇಹದಿಂದ ರಕ್ತ ತೆಗೆದು ಅದರಲ್ಲಿನ ಪ್ಲಾಸ್ಮಾ ಮಾತ್ರ ಪಡೆದ್ದು ಅದರಿಂದ ಬೇರೆ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುವುದೇ ಪ್ಲಾಸ್ಮಾ ಥೆರಪಿಯಾಗಿದೆ.

ಈ ಕುರಿತು ಮಾತನಾಡಿದ ಸಚಿವ ಸುಧಾಕರ್, ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ ಇಂದಿನಿಂದ ಆರಂಭವಾಗಲಿದೆ. ಇದೊಂದು ಐತಿಹಾಸಿಕ ಹೆಜ್ಜೆ. ಮೊದಲ ಸೋಂಕಿತ ವ್ಯಕ್ತಿ ಈಗ ಕೊರೊನಾದಿಂದ ಸಂಪೂರ್ಣ ಗುಣಮುಖರಗಿದ್ದು, ಅವರು ಸ್ವಯಂ ಪ್ರೇರಣೆಯಿಂದ ಮುಂದೆ ಬಂದಿದ್ದು, ನನ್ನಿಂದ ಸೋಂಕಿತರು ಗುಣಮುಖರಾದರೆ ಅದಕ್ಕಿಂತ ಸಂತೋಷ ಇನ್ನೊಂದಿಲ್ಲ. ತನ್ನ ಪ್ಲಾಸ್ಮಾ ಪಡೆದು ಚಿಕಿತ್ಸೆ ನೀಡುವಂತೆ ಹೇಳಿದ್ದಾರೆ ಎಂದು ತಿಳಿಸಿದರು


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ