Breaking News

ವಿವಾಹಿತೆ ಮಹಿಳೆಯ ಬ್ಲಾಕ್ ಮೇಲ್ ಗೆ ಸಿಲುಕಿ ಯುವಕ ಆತ್ಮಹತ್ಯೆ..!?

Spread the love

ನೆಲಮಂಗಲ ಟೌನ್ ವಾಜರಹಳ್ಳಿಯಲ್ಲಿ ಘಟನೆ 28 ವರ್ಷದ ಯುವಕ ದಿಲೀಪ್ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಜಿಮ್ ಟ್ರೈನರ್ ಆಗಿದ್ದ ದಿಲೀಪ್ ಗೆ ಜಿಮ್ ನಲ್ಲಿ 42 ವರ್ಷದ ಯೋಗಿತಾ ಪರಿಚಯ ಆಗಿದ್ದಳು. ಮದುವೆ ಆಗಿದ್ದರೂ ದಿಲೀಪ್ ಜೊತೆ ಸಂಬಂಧ ಬೆಳೆಸಿ ಮಹಿಳೆ ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ದಿಲೀಪ್ ಸಾ*ವಿಗೆ ಯೋಗಿತಾ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ದಿಲೀಪ್ ಮಹಿಳೆಗೆ ಕರೆ ಮಾಡಿ ಮನೆಯ ರೂಮಿನಲ್ಲಿ ನೇಣಿಗೆ ಶರಣಾಗಿದ್ದಾರೆ. ರಾತ್ರಿ ಇನ್ಸ್ಟಾಗ್ರಾಮ್ ಮೂಲಕ ದಿಲೀಪ್ ಸಹೋದರಿಗೆ ಯೋಗಿತಾ ನಿನ್ನ ಸಹೋದರ ರೂಮಿನಲ್ಲಿ ಸೂ*ಸೈಡ್ ಮಾಡಿಕೊಂಡಿದ್ದಾನೆ ಎಂದು ಮೆಸೇಜ್ ಮಾಡಿದ್ದಾರೆ. ಬಾಗಿಲು ಮುರಿದು ನೋಡಿದಾಗ ಪ್ರಕರಣ ಬೆಳಕಿಗೆ ಬೆಳಗಿದೆ ಬಂದಿದೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಸೊಕೊ ತಂಡ ಭೇಟಿ, ಪರಿಶೀಲನೆ ನಡೆಸಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ