Breaking News

ಬೆಳಗಾವಿ | 288 ಮಂದಿಗೆ ಕೋವಿಡ್ ದೃಢ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 288 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.

ಬಿಮ್ಸ್‌ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಹುಕ್ಕೇರಿ ತಾಲ್ಲೂಕಿನ ಮೂವರು, ರಾಯಬಾಗದ ಒಬ್ಬರು ಹಾಗೂ ಬೆಳಗಾವಿ ತಾಲ್ಲೂಕಿನ ಇಬ್ಬರು ಸೇರಿ ಆರು ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಇತ್ತು ಎಂದು ಜಿಲ್ಲಾಡಳಿತ ತಿಳಿಸಿದೆ.

140 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಗುರುವಾರದವರೆಗೆ ಜಿಲ್ಲೆಯಲ್ಲಿ 59,188 ಮಂದಿಯಿಂದ ಗಂಟಲು ಅಥವಾ ಮೂಗಿನ ದ್ರವದ ಮಾದರಿ ಪರೀಕ್ಷಿಸಲಾಗಿದೆ. 51,470 ಮಂದಿಯ ವರದಿ ನೆಗೆಟಿವ್ ಬಂದಿದೆ.

ನಿಪ್ಪಾಣಿ ವರದಿ: ನಗರದ 28 ಸೇರಿ ತಾಲ್ಲೂಕಿನಲ್ಲಿ ಐವರಿಗೆ ಕೋವಿಡ್ ದೃಢಪಟ್ಟಿದೆ. ಇದರೊಂದಿಗೆ ತಾಲ್ಲೂಕಿನಲ್ಲಿ ಸೋಂಕಿತರ ಸಂಖ್ಯೆ 212ಕ್ಕೆ ಏರಿದೆ. ಕೊಗನೋಳಿ, ಡೋಣೆವಾಡಿ, ಕಾರದಗಾ, ಬಾರವಾಡ ಹಾಗೂ ಬೆನಾಡಿ ಗ್ರಾಮದ ತಲಾ ಒಬ್ಬರಿಗೆ ಸೋಂಕು ತಗುಲಿದೆ.

ಖಾನಾಪುರ ವರದಿ: ಪಟ್ಟಣದ 2 ವರ್ಷದ ಬಾಲಕ ಸೇರಿದಂತೆ ತಾಲ್ಲೂಕಿನಲ್ಲಿ ಗುರುವಾರ 6 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಇಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 150ಕ್ಕೆ ಏರಿದೆ. 


Spread the love

About Laxminews 24x7

Check Also

ಗುಲ್ಬರ್ಗಾ ವಿವಿ ಅತಿ ಹಿಂದುಳಿದ ವಿಶ್ವವಿದ್ಯಾಲಯ ಆಗಿದೆ : ಮಲ್ಲಿಕಾರ್ಜುನ್​ ಖರ್ಗೆ

Spread the loveಕಲಬುರಗಿ : ಜಿಲ್ಲೆಯಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಲಬುರಗಿ ಬೆಂಗಳೂರಿನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ