Breaking News

ಆರೋಗ್ಯ ಇಲಾಖೆ ಸಿಬ್ಬಂದಿ ನಡೆಸುತ್ತಿದ್ದ ಮುಷ್ಕರ ಮುಗಿಸಿ ವಾಪಸ್ಸು ಹೋಗುವಾಗ ಅಪಘಾತ

Spread the love

ಬೇಲೂರು: ತಾಲ್ಲೂಕಿನ ಶಿವಯೋಗಿಪುರದಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಚಾಲಕ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅರೇಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರೂಪ್ ಡಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂಜು (30) ಮೃತಪಟ್ಟಿದ್ದಾರೆ. ಹಾಸನದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನಡೆಸುತ್ತಿದ್ದ ಮುಷ್ಕರದಲ್ಲಿ ಭಾಗವಹಿಸಿ ವಾಪಸ್‌ ಊರಿಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಹಿಂಬದಿ ಸವಾರರಾದ ನಾರಾಯಣ, ಮಮತಾ ಅವರ ಕೈ, ಕಾಲು, ತಲೆಗೆ ಪೆಟ್ಟಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ರಸ್ತೆ ಮೇಲೆ ಸತ್ತು ಬಿದ್ದಿದ್ದ ನಾಯಿ ಮೇಲೆ ಕಾರು ಹತ್ತುವುದನ್ನು ತಪ್ಪಿಸಲು ಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

Spread the loveಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ