ಬೈಲಹೊಂಗಲ: ನೇಸರಗಿಯಲ್ಲಿ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ.
ಅಂದಾಜು 76076 ರೂ. ಮೌಲ್ಯದ ಪಡಿತರ ಅಕ್ಕಿಯ 71 ಬ್ಯಾಗ್ ಗಳನ್ನು ಬೊಲೆರೊ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಬೊಲೆರೊ ಪಿಕ್ ಅಪ್ ವಾಹನವನ್ನು ಜಪ್ತಿ ಮಾಡಿ ಕಾನೂನು ಕ್ರಮ ಮುಂದುವರಿಸಲಾಗಿದೆ