Breaking News

ಎಸ್‌ಐಆರ್‌ ಡ್ಯೂಟಿ ಮುಗಿಸಿ ಮನೆಗೆ ಬಂದಿದ್ದ ಬಿಎಲ್‌ಒ ಹೃದಯಾಘಾತದಿಂದ ಸಾವು

Spread the love

ದಾವಣಗೆರೆ: ದಿನಪೂರ್ತಿ ಎಸ್‌ಐಆರ್‌ (SIR) ಡ್ಯೂಟಿ ಮಾಡಿ ಮನೆಗೆ ಬಂದಿದ್ದ ಬಿಎಲ್ಒ  ಹೃದಯಾಘಾತದಿಂದ  ಸಾವನ್ನಪ್ಪಿದ ಘಟನೆ ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದಲ್ಲಿ ನಡೆದಿದೆ.

ಡಿ.ಆರ್.ರಾಜಪ್ಪ (57) ಹೃದಯಾಘಾತದಿಂದ ಸಾವನ್ನಪ್ಪಿದ ಬಿಎಲ್ಒ. ಅವರು ಚಿರಡೋಣಿ ಗ್ರಾಮ ಪಂಚಾಯತ್‌ನಲ್ಲಿ ಬಿಲ್ ಕಲೆಕ್ಟರ್ ಆಗಿದ್ದರು. ಜು.10 ರಂದು ಎಸ್‌ಐಆರ್‌ ಕೆಲಸದ ಮೇಲೆ ಮನೆ ಮನೆಗೆ ಭೇಟಿ ನೀಡಿ, ವಾಪಸ್‌ ಆಗಿದ್ದರು.

ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಬಳಿಕ ಹೃದಯಾಘಾತದಿಂದ ಅವರು ಸಾವನ್ನಪ್ಪಿದ್ದಾರೆ. ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ