Breaking News

ಇರುವ 16 ಸ್ಥಾನಗಳಲ್ಲಿ ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕೆಂಬುದು ಮುಖ್ಯಮಂತ್ರಿಗೆ ಸವಾಲಾಗಿದೆ.

Spread the love

ಬೆಂಗಳೂರು,ಜ.23-ರಾಜ್ಯದಲ್ಲಿ ಬಂಡವಾಳ ಹೂಡಿಕೆ ಸಂಬಂಧ ಉದ್ಯಮಿಗಳನ್ನು ಆಕರ್ಷಿಸಲು ಸ್ವಿಡ್ಜಲ್ರ್ಯಾಂಡ್‍ನ ದಾವೋಸ್‍ಗೆ ತೆರಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ನಿಯೋಗ ನಾಳೆ ನಗರಕ್ಕೆ ಹಿಂದಿರುಗಲಿದೆ. ನಾಳೆ ಬೆಳಗ್ಗೆ ದಾವೋಸ್‍ನಿಂದ ರಸ್ತೆಮೂಲಕ ಜೂರಿಚ್‍ಗೆ ಆಗಮಿಸಿ ಅಲ್ಲಿಂದ ದುಬೈಗೆ ಬಂದು ಮಧ್ಯಾಹ್ನ 3.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ವಿಶ್ವ ಆರ್ಥಿಕ ಶೃಂಗ ಸಮ್ಮೇಳನದ ಸಂದರ್ಭದಲ್ಲಿ ಈ ಬಾರಿ ರಾಜ್ಯ ನಿಯೋಗಕ್ಕೆ ಕೆಲವು ಉದ್ಯಮಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಕಂಡುಬಂದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ 2ನೇ ಹಂತದ ನಗರಗಳಾದ ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಮೂರನೇ ಹಂತದ ನಗರಗಳಾದ ತುಮಕೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಬಿಜಾಪುರ ಸೇರಿದಂತೆ ಮತ್ತಿತರ ಕಡೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿದ್ದಾರೆ.

ಗರಿಗೆದರಿದ ಚಟುವಟಿಕೆಗಳು: ಕಳೆದ ಒಂದು ವಾರದಿಂದ ಸ್ಥಗಿತಗೊಂಡಿದ್ದ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಲಿವೆ. ಮುಖ್ಯಮಂತ್ರಿಗಳು ವಿದೇಶ ಪ್ರವಾಸಕ್ಕೆ ತೆರಳಿದ್ದರಿಂದ ಸರ್ಕಾರ ಮತ್ತು ಬಿಜೆಪಿಯಲ್ಲಿ ಒಂದು ನೀರವ ಮೌನ ಆವರಿಸಿತ್ತು. ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ, ಪುನಾರಚನೆ, ವಿಧಾನಪರಿಷತ್‍ಗೆ ಆಯ್ಕೆ ಸೇರಿದಂತೆ ಮತ್ತಿತರ ಪ್ರಮುಖ ಪ್ರಕ್ರಿಯೆಗಳು ಸಿಎಂ ಆಗಮನದ ಬಳಿಕ ಆರಂಭವಾಗಲಿವೆ.

ಉಪಚುನಾವಣೆ ಮುಗಿದು ಈಗಾಗಲೇ ಒಂದು ತಿಂಗಳು ಕಳೆದಿದ್ದು, ಕಾಂಗ್ರೆಸ್-ಜೆಡಿಎಸ್‍ಗೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿ ಗೆದ್ದಿರುವ ಶಾಸಕರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ. ಪದೇ ಪದೇ ಸಂಪುಟ ವಿಸ್ತರಣೆ ಮುಂದೂಡಿಕೆಯಾಗುತ್ತಿರುವುದರಿಂದ ನೂತನ ಶಾಸಕರ ಕಣ್ಣು ಕೆಂಪಾಗಿದೆ.

ಇದರ ಜೊತೆಗೆ ಕೆಲವು ಶಾಸಕರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಇರುವ 16 ಸ್ಥಾನಗಳಲ್ಲಿ ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕೆಂಬುದು ಮುಖ್ಯಮಂತ್ರಿಗೆ ಸವಾಲಾಗಿದೆ.
ದಾವೋಸ್‍ನಿಂದ ಹಿಂತಿರುಗಿದ ಎರಡೇ ದಿನದಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಬಿಎಸ್‍ವೈ ಹೇಳಿದ್ದರು. ಈಗ ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳುವ ಜವಾಬ್ದಾರಿ ಅವರ ಮೇಲಿದೆ.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ