ಇಂದು 9 ಮಂದಿಯಲ್ಲಿ ಕೊರೊನಾ ಪತ್ತೆ, ರಾಜ್ಯದಲ್ಲಿ 427ಕ್ಕೆ ಏರಿದ ಸೋಂಕಿತರ ಸಂಖ್ಯೆ..

Spread the love

ಬೆಂಗಳೂರು : ಅತ್ತ ಸರ್ಕಾರ ಲಾಕ್ ಡೌನ್ ನಿಯಮಗಳಲ್ಲಿ ಕೊಂಚ ಸಡಿಲಿಕೆ ಮಾಡಿರುವ ಬೆನ್ನಲ್ಲೇ, ಇತ್ತ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಮುಖವಾಗಿದೆ. ರಾಜ್ಯದ ವಿವಿಧೆಡೆ ಕಳೆದ 24 ಗಂಟೆಗಳಲ್ಲಿ ಅಂದರೆ ಮಂಗಳವಾರ ಸಂಜೆ 5 ರಿಂದ ಬುಧವಾರ ಸಂಜೆ 5 ರ ವರೆಗೆ 9 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಸೋಮವಾರ 18 ಮತ್ತು ಮಂಗಳವಾರ 10 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಇದೀಗ ಬುಧವಾರ 9 ಜನರಿಗೆ ಕೋವಿಡ್‌-19 ಇರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆಯಾಗಿದೆ. ಈ ಮೂಲಕ ಸತತ ಎರಡನೇ ದಿನವೂ ರಾಜ್ಯದಲ್ಲಿ ಹೊಸ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ

ಕೊರೊನಾ ಸೋಂಕು ರಾಜ್ಯದಲ್ಲಿ ಕಾಣಿಸಿಕೊಂಡಾಗಿನಿಂದ ಇಲ್ಲಿವರೆಗೆ ಒಟ್ಟು 427 ಜನರಿಗೆ ಕೊರೊನಾ ಸೋಂಕು ತಗುಲಿದಂತಾಗಿದೆ.ಕಲಬುರಗಿಯಲ್ಲಿಯೇ 5 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 2 ಪ್ರಕರಣಗಳು ಹಾಗೂ ಮೈಸೂರಿನಲ್ಲಿ 2 ಪ್ರಕರಣಗಳು ಬೆಳಕಿಗೆ ಬಂದಿವೆ.

ಕಳೆದ ಮೂರು ದಿನಗಳಿಂದ ಒಂದೂ ಪ್ರಕರಣ ಇಲ್ಲದೇ ನೆಮ್ಮದಿಯಾಗಿದ್ದ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಎರಡು ಹೊಸ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರು ನಗರದ 54 ವರ್ಷ ಮತ್ತು 28 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ನಾಲ್ಕು ತಿಂಗಳ ಮಗು ಸೇರಿದಂತೆ ಕಲಬುರ್ಗಿ ಜಿಲ್ಲೆಯಲ್ಲಿ ‌ಮತ್ತೆ ಐವರಿಗೆ ಕೊವಿಡ್ 19 ದೃಢಪಟ್ಟಿದೆ. 46 ವರ್ಷದ ಮಹಿಳೆ, 57 ವರ್ಷದ ಪುರುಷ, 36 ವರ್ಷದ ಮಹಿಳೆ ಹಾಗೂ 25 ವರ್ಷದ ಮಹಿಳೆಯಲ್ಲಿ ‌ಸೋಂಕು ಕಾಣಿಸಿಕೊಂಡಿದೆ.

25 ವರ್ಷದ ಮಹಿಳೆ ನಾಲ್ಕು ತಿಂಗಳ ಮಗುವಿನ ತಾಯಿಯಾಗಿದ್ದು, ಅವರನ್ನು ‌ಕಲಬುರ್ಗಿಯ ಇಎಸ್ಐಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ ಕಲಬುರಗಿ ‌ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 35ಕ್ಕೇರಿದೆ. ಇನ್ನಿಬ್ಬರು ಮೈಸೂರಿನ ನಂಜನಗೂಡಿನವರಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬುಧವಾರ ಮಧ್ಯಾಹ್ನ 12 ಗಂಟೆಗೆ ಬಿಡುಗಡೆ ಮಾಡಿದ್ದ ರೋಗಿಗಳ ಪಟ್ಟಿಯಲ್ಲಿ ಏಳು ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಆದರೆ ಸಂಜೆ ವೇಳೆ ನಂಜನಗೂಡಿನ ಇಬ್ಬರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ.

ಸದ್ಯ ರಾಜ್ಯದಲ್ಲಿ 279 ಸಕ್ರಿಯ ಪ್ರಕರಣಗಳಿದ್ದು, ಇವರಲ್ಲಿ ಓರ್ವ ಗರ್ಭಿಣಿ ಸೇರಿ 274 ರೋಗಿಗಳ ಆರೋಗ್ಯ ಸ್ಥಿರವಾಗಿದೆ. ಇನ್ನು ಐವರು ವಿಶೇಷ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಸೋಂಕಿನಿಂದ ಚಿಕಿತ್ಸೆ ಪಡೆದು ಗುಣಮುಖರಾಗಿ 138 ಜನರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

17 ಜನರು ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ 274 ಮಂದಿ ಸೋಂಕಿತರು ವಾರ್ಡ್​ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದು ಐಸಿಯುಗಳಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ.


Spread the love

About Laxminews 24x7

Check Also

ಬೆಲೆ ಏರಿಕೆ ನಡುವೆ BSNL ಗ್ರಾಹಕರಿಗೆ ಗುಡ್ ನ್ಯೂಸ್

Spread the love ನವದೆಹಲಿ: ಭಾರತದಲ್ಲಿನ ಟೆಲಿಕಾಂ ಸೇವಾ ಪೂರೈಕೆದಾರರು ಇತ್ತೀಚೆಗೆ ತಮ್ಮ ರೀಚಾರ್ಜ್ ಬೆಲೆಗಳನ್ನು ನವೀಕರಿಸಿದ್ದಾರೆ. ರಿಲಯನ್ಸ್ ಜಿಯೋ, ಏರ್‌ಟೆಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ