ಬೆಂಗಳೂರು: ಕೊರೊನಾ ಹಾಟ್ ಸ್ಪಾಟ್ ಆಗಿರುವ ಸಿಲಿಕಾನ್ ಸಿಟಿಯ ಶಿವಾಜಿನಗರದಲ್ಲಿ ಇದೀಗ ಮತ್ತೆ 14 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಹೌಸ್ ಕೀಪಿಂಗ್ ಜೊತೆ ದ್ವಿತೀಯ ಸಂಪರ್ಕದಲ್ಲಿ ಇದ್ದ ವ್ಯಕ್ತಿಗಳಿಗೆ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ 20 ಜನರ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, ಇದರಲ್ಲಿ 14 ಮಂದಿಗೆ ಪಾಸಿಟಿವ್ ಇರುವುದು ದೃಢವಾಗಿದೆ.

ಶುಕ್ರವಾರ 22 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ 11 ಜನರಿಗೆ ಕೊರೊನಾ ದೃಢಪಟ್ಟಿತ್ತು. ಹೀಗಾಗಿ ಶಿವಾಜಿನಗರದಲ್ಲಿ ಇದೀಗ ಒಟ್ಟು ಪ್ರಕರಣಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ 202 ಪ್ರಕರಣ ಪತ್ತೆಯಾಗಿದ್ದು, ಇಂದಿನ 14 ಪ್ರಕರಣ ಸೇರಿ 216ಕ್ಕೆ ಏರಿಕೆಯಾಗಿದೆ. ಈ ಮೂಲಕ ಶಿವಾಜಿನಗರ ಕೊರೊನಾ ಹಬ್ ಆಗಿದೆ.
ಒಂದೇ ಬಿಲ್ಡಿಂಗ್ ನಲ್ಲಿ ಇದ್ದ 72 ಜನರನ್ನ ಕ್ವಾರಂಟೈನ್ ಮಾಡಲಾಗಿತ್ತು. ಅದರಲ್ಲಿ ನಿನ್ನೆ 22 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ 11 ಪಾಸಿಟಿವ್ ದೃಢಪಟ್ಟಿತ್ತು. ಇಂದು 20 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ 14 ಪಾಸಿಟಿವ್ ಬಂದಿದೆ. ಈ 14 ಜನ ಹಾಗೂ ನಿನ್ನೆ ಪಾಸಿಟಿವ್ ಬಂದ 11 ಜನ ಒಂದೇ ಪ್ಲೋರ್ ನಲ್ಲಿ ಇದ್ದರು.
Laxmi News 24×7