Breaking News
Microscopic view of Coronavirus, a pathogen that attacks the respiratory tract. Analysis and test, experimentation. Sars. 3d render

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಹೊಸದಾಗಿ 36 ಜನರಲ್ಲಿ ಸೋಂಕು ಪತ್ತೆ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಹೊಸದಾಗಿ 36 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1092ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಆಲ್ಖೆ ನೀಡಿದ ಸಂಜೆಯ ಬುಲೆಟಿನ್ ಪ್ರಕಾರ ಇಂದು ರಾಜ್ಯದಲ್ಲಿ 36 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಬೆಂಗಳೂರಿನಲ್ಲಿ 16, ಹಾಸನ 3 ಕಲಬುರಗಿ 8, ಶಿವಮೊಗ್ಗ 3, ಮಂಡ್ಯದಲ್ಲಿ 1, ಬಾಗಲಕೋಟೆ, ಬಳ್ಳಾರಿ, ಧಾರವಾಡ, ದಾವಣಗೆರೆ, ಉಡುಪಿಯಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಈ ವರೆಗೆ ಸೋಂಕಿಗೆ 36 ಜನ ಬಲಿಯಾಗಿದ್ದಾರೆ. 1092 ಜನ ಸೋಂಕಿತರ ಪೈಕಿ 496 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ