Home / ರಾಜ್ಯ / “ನಾನು ಬಾರಿ ಕೆಟ್ಟ ಮನುಷ್ಯ ಇದ್ದಿನಿ.. ಬಾಯಿ ಮುಚ್ಚು ರಾಸ್ಕಲ್” ಎಂದು ಮಹಿಳೆಯರನ್ನು ಗದರಿಸಿದ್ದಾರೆ. ಮಾಧುಸ್ವಾಮಿ

“ನಾನು ಬಾರಿ ಕೆಟ್ಟ ಮನುಷ್ಯ ಇದ್ದಿನಿ.. ಬಾಯಿ ಮುಚ್ಚು ರಾಸ್ಕಲ್” ಎಂದು ಮಹಿಳೆಯರನ್ನು ಗದರಿಸಿದ್ದಾರೆ. ಮಾಧುಸ್ವಾಮಿ

Spread the love

ಬೆಂಗಳೂರು: ಕಾನೂನು ಸಚಿವ ಮಾಧುಸ್ವಾಮಿ ಬುಧವಾರ ಕೋಲಾರದಲ್ಲಿ ರೈತ ಮಹಿಳೆಯನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಕಾರ್ಯಕರ್ತರು ಇಂದು ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ಗೆ ದುರು ನೀಡಿದ್ದಾರೆ.
ಕೆಸಿ ವ್ಯಾಲಿ ಯೋಜನೆಯಿಂದ ತುಂಬಿದ ಕೆರೆಗಳನ್ನು ವೀಕ್ಷಣೆ ಮಾಡುವ ಸಲುವಾಗಿ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ನಿನ್ನೆ ಕೋಲಾರಕ್ಕೆ ಆಗಮಿಸಿದ್ದರು.  ಇದೇ ವೇಳೆ ಅವರು ಅಗ್ರಹಾರ ಕೆರೆ ವೀಕ್ಷಣೆಗಾಗಿಯೂ ಸ್ಥಳಕ್ಕೆ ಆಗಮಿಸಿದ್ದರು.
ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ಕೋಲಾರ ಜಿಲ್ಲಾದ್ಯಕ್ಷೆ ನಳಿನಿ ಗೌಡ ಹಾಗೂ ಮತ್ತೊರ್ವ ಮಹಿಳಾ ಹೋರಾಟಗಾರ್ತಿ ಸಚಿವರಿಗೆ ಮನವಿ ನೀಡಲು ಮುಂದಾದರು. ಅಲ್ಲದೆ, “ದಯವಿಟ್ಟು ಅಗ್ರಹಾರ ಕೆರೆಯಲ್ಲಿನ ಒತ್ತುವರಿಯನ್ನು ತೆರವುಗೊಳಿಸಿ” ಎಂದು ಸಚಿವರ ಬಳಿ ವಿನಂತಿಸಿಕೊಂಡಿದ್ದರು. ಆದರೆ, ಈ ವೇಳೆ ಗರಂ ಆದ ಸಚಿವರು “ನೀನು ತೆರವು ಮಾಡ್ತೀಯೇನಮ್ಮ” ಎಂದು ಗದರಿಸಲು ಶುರು ಮಾಡಿದ್ದರು.
ಸಚಿವರ ಮಾತಿಗೆ ಉತ್ತರಿಸಿದ್ದ ರೈತ ಮಹಿಳಾ, “ಅದು ನಮ್ಮ ಕೆಲಸ ಅಲ್ಲಾ ಸಾರ್‌..! ನಿಮ್ಮ ಕೆಲಸ ಅದನ್ನು ನೀವು ಮಾಡಿ” ಎಂದದ್ದೇ ತಪ್ಪಾಯಿತೇನೋ? ಕೂಡಲೇ ತಾಳ್ಮೆ ಕಳೆದುಕೊಂಡು ಕೆಂಡಾಮಂಡಲವಾದ ಸಚಿವ ಮಾಧುಸ್ವಾಮಿ, “ನಾನು ಬಾರಿ ಕೆಟ್ಟ ಮನುಷ್ಯ ಇದ್ದಿನಿ.. ಬಾಯಿ ಮುಚ್ಚು ರಾಸ್ಕಲ್” ಎಂದು ಮಹಿಳೆಯರನ್ನು ಗದರಿಸಿದ್ದಾರೆ. ಅಲ್ಲದೆ, ಪೊಲೀಸ್‌ ಅಧಿಕಾರಿಗಳನ್ನು ಕರೆದು ಕೂಡಲೇ ಇಬ್ಬರೂ ಮಹಿಳೆಯರನ್ನೂ ಅಲ್ಲಿಂದ ಒತ್ತಾಯಪೂರ್ವಕವಾಗಿ ಹೊರಹಾಕಿಸಿದ್ದಾರೆ.
ನೂರಾರು ಜನ ಹಾಗೂ ಸ್ವತಃ ಪೊಲೀಸರ ಎದುರು ಕಾನೂನು ಸಚಿವ ರೈತ ಮಹಿಳೆಯರ ವಿರುದ್ಧ ನಾಲಿಗೆ ಹರಿಬಿಟ್ಟಿರುವುದು ಇದೀಗ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಭಾರೀ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯ ಕಾಂಗ್ರೆಸ್‌ ಘಟಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು ಕೂಡಲೇ ಸಚಿವ ಮಾಧುಸ್ವಾಮಿ ಕ್ಷಮೆ ಕೇಳಬೇಕು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಅವರನ್ನು ಭೇಟಿ ಮಾಡಿರುವ ಕಾಂಗ್ರೆಸ್‌ ಕಾರ್ಯಕರ್ತರು, “ಸಚಿವ ಮಾಧುಸ್ವಾಮಿ ರೈತ ಮಹಿಳೆಯ ಮೇಲೆ ದರ್ಪ ತೋರಿಸಿದ್ದಾರೆ. ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಹೀಗಾಗಿ ಸಚಿವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ದೂರು ನೀಡಿದ್ದಾರೆ.

Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ