ಬೆಂಗಳೂರು : ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಹಾಗೂ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ರಾಜ್ಯ ಸರ್ಕಾರ ಇಂದುಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯದಲ್ಲಿ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂಗೊಳಿಸಲು ಸೂಚನೆ ನೀಡಿದೆ.
ಕೊರೊನಾ ಸೋಂಕು ನಿಯಂತ್ರಣಕ್ಕೆ ತಮ್ಮ ಜೀವನವನ್ನು ಲೆಕ್ಕಿಸದೆ ಹೋರಾಡುತ್ತಿದ್ದಾರೆ. ಗುತ್ತಿಗೆ ಆದಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ಹಾಗು ಸರ್ಕಾರಿ ವೈದ್ಯರು ಕಡಿಮೆ ಸಂಬಳ ಪಡೆಯಲಾಗುತ್ತಿದೆ.ವೇತನ ಹೆಚ್ಚಸಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದರು. ಇದರಿಂದ ಸರ್ಕಾರ ಎಚ್ಚೆತ್ತುಕೊಂಡು ಗುತ್ತಿಗೆ ವೈದ್ಯರನ್ನು ಖಾಯಂಗೊಳಿಸಬೇಕು. ಅವರ ವೇತನವನ್ನು ಹಂತ ಹಂತವಾಗಿ ಹೆಚ್ಚಿಸಲಾಗುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಜತೆಗೆ ಸರ್ಕಾರಿ ವೈದ್ಯರ ವೇತನವನ್ನು ಸಹ ಹೆಚ್ಚಳಕ್ಕೆ ಸೂಚಿಸಿದ್ದಾರೆ. ಗುತ್ತಿಗೆ ನೌಕರರ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನುಖಾಯಂಗೊಳಿಸಲು ಕಾನೂನಿನಲ್ಲಿ ತೊಡಕಿದೆ ಎಂಬ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿ ಕಾನೂನು ತೊಡಕನ್ನು ನಿವಾರಣೆ ಮಾಡುವ ಮೂಲಕ ಖಾಯಂಗೊಳಿಸಬೇಕು ಎಂದು ಸೂಚಿಸಿದ್ದಾರೆ.