Home / ಜಿಲ್ಲೆ / ಬೆಂಗಳೂರು / ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್

ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್

Spread the love

ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ ತಾಲ್ಲೂಕು ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ(ಜಿ.ಪಂ) ಸಿ ಮಂಜೂರ್, ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ ತಾಲೂಕು ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವ ಕುರಿತು ಕರ್ನಾಟಕ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಿದ್ದು, ಮುಂದಿನ ಅಗತ್ಯ ಕ್ರಮಕ್ಕಾಗಿ ಕಳುಹಿಸಿ ಕೊಡಲಾಗಿದೆ ಎಂಬುದಾಗಿ ರಾಜ್ಯ ಹೊಸ ತಾಲೂಕುಗಳ ಜಿಲ್ಲಾ ಪಂಚಾಯ್ತಿಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳುಹಿಸಿ ಕೊಟ್ಟಿದ್ದಾರೆ.

 ಆಡಳಿತಾಧಿಕಾರಿಗಳು ನೇಮಕಗೊಂಡ ತಾಲೂಕು ಪಂಚಾಯ್ತಿಗಳ ಪಟ್ಟಿ

ಬಾಗಲಕೋಟೆ ಜಿಲ್ಲೆ – ಗುಳೇಗುಡ್ಡ, ರಬಕವಿ-ಬನಹಟ್ಟಿ, ಇಲಕಲ್ ತಾಲೂಕುಗಳಿಗೆ ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯ್ತಿ, ಬಾಗಲಕೋಟೆ ಇವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಬೆಳಗಾವಿ ಜಿಲ್ಲೆ – ನಿಪ್ಪಾಣಿ ತಾಲೂಕು ಪಂಚಾಯ್ತಿಗೆ ಉಪ ಕಾರ್ಯದರ್ಶಿ(ಆಡಳಿತ), ಜಿಲ್ಲಾ ಪಂಚಾಯಿತಿ, ಬೆಳಗಾವಿ ಇವರನ್ನು ನೇಮಕ ಮಾಡಿದೆ. ಕಾಗವಾಡ, ಮೂಡಲಗಿಗೆ, ಉಪ ಕಾರ್ಯದರ್ಶಿ (ಅಭಿವೃದ್ಧಿ), ಜಿಲ್ಲಾ ಪಂಚಾಯ್ತಿ, ಬೆಳಗಾವಿ ಇವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಚಾಮರಾಜನಗರ ಜಿಲ್ಲೆ – ಹನೂರು ತಾಲೂಕು ಪಂಚಾಯ್ತಿಗೆ, ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯ್ತಿ, ಚಾಮರಾಜನಗರ ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.

ದಾವಣಗೆರೆ ಜಿಲ್ಲೆ – ನ್ಯಾಮತಿ ತಾಲೂಕು ಪಂಚಾಯ್ತಿಗೆ, ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯ್ತಿ ದಾವಣಗೆರೆ ಇವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿದೆ.

ಬೀದರ್ ಜಿಲ್ಲೆ – ಚಿಟ್ಟಗುಪ್ಪ, ಹುಲಸೂರು, ಕಮಲನಗರ ತಾಲೂಕು ಪಂಚಾಯ್ತಿಗಳಿಗೆ ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯ್ತಿ ಬೀದರ್ ಇವರನ್ನು ಆಡಳಿತಾಧಿಯಾಗಿ ನೇಮಕ ಮಾಡಿದೆ.

ಬಳ್ಳಾರಿ ಜಿಲ್ಲೆ – ಕುರುಗೋಡು ತಾಲೂಕು ಪಂಚಾಯ್ತಿಗೆ ಉಪ ಕಾರ್ಯದರ್ಶಿ(ಆಡಳಿತ) ಜಿಲ್ಲಾ ಪಂಚಾಯ್ತಿ ಬಳ್ಳಾರಿ ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿದ್ದರೆ, ಕೊಟ್ಟೂರು, ಕಂಪ್ಲಿ ತಾಲೂಕು ಪಂಚಾಯ್ತಿಗಳಿಗೆ ಉಪ ಕಾರ್ಯದರ್ಶಿ(ಅಭಿವೃದ್ಧಿ) ಜಿಲ್ಲಾ ಪಂಚಾಯ್ತಿ ಬಳ್ಳಾರಿ ಇವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿದೆ.

ಧಾರವಾಡ ಜಿಲ್ಲೆ – ಅಣ್ಣಿಗೇರಿ, ಅಳ್ನಾವರ ತಾಲೂಕು ಪಂಚಾಯ್ತಿಗಳಿಗೆ ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯ್ತಿ ಧಾರವಾಡ ಇವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿದೆ.

ಗದಗ ಜಿಲ್ಲೆ – ಗಜೇಂದ್ರ ಗಡ, ಲಕ್ಷ್ಮೇಶ್ವರ ತಾಲೂಕು ಪಂಚಾಯ್ತಿಗಳಿಗೆ ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯ್ತಿ ಗದಗ ಇವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿದೆ.
ಕಲಬುರ್ಗಿ ಜಿಲ್ಲೆ – ಕಾಳಗಿ, ಕಮಲಾಪುರ, ಯಾಡ್ರಮಿ, ಶಹಬಾದ್ ತಾಲೂಕುಗಳಿಗೆ ಉಪ ಕಾರ್ಯದರ್ಶಿ ಜಿಲ್ಲಾ ಪಂಚಾಯ್ತಿ, ಕಲಬರ್ಗಿ ಇವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿದೆ.

ಯಾದಗಿರಿ ಜಿಲ್ಲೆ – ಹಣಸಗಿ, ವಡಗೇರಾ, ಗುರುಮಿಟ್ಕಲ್ ತಾಲೂಕು ಪಂಚಾಯ್ತಿಗಳಿಗೆ ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯ್ತಿ ಯಾದಗಿರಿ ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.

ಕೊಪ್ಪಳ ಜಿಲ್ಲೆ – ಕುಕುನೂರು, ಕನಕಗಿರಿ, ಕಾರಟಗಿ ತಾಲೂಕು ಪಂಚಾಯ್ತಿಗಳಿಗೆ ಉಪ ಕಾರ್ಯದರ್ಶಿ(ಆಡಳಿತ) ಜಿಲ್ಲಾ ಪಂಚಾಯ್ತಿ ಕೊಪ್ಪಳ ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.

ರಾಯಚೂರು ಜಿಲ್ಲೆ – ಮಸ್ಕಿ, ಸಿರವಾರ ತಾಲೂಕು ಪಂಚಾಯ್ತಿಗಳಿಗೆ ಉಪ ಕಾರ್ಯದರ್ಶಿ ಜಿಲ್ಲಾ ಪಂಚಾಯ್ತಿ ರಾಯಚೂರು ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.

ಉಡುಪಿ ಜಿಲ್ಲೆ – ಬ್ರಹ್ಮಾವರ, ಕಾಪು, ಬೈಂದೂರು, ಹೆಬ್ರಿ ತಾಲೂಕು ಪಂಚಾಯ್ತಿಗಳಿಗೆ ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯ್ತಿ ಉಡುಪಿ ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆ – ಮೂಡಬಿದರೆ, ಕಡಬ ತಾಲೂಕು ಪಂಚಾಯ್ತಿಗಳಿಗೆ ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯ್ತಿ, ದಕ್ಷಿಣ ಕನ್ನಡ ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.

ಬೆಂಗಳೂರು ನಗರ – ಯಲಹಂಕ ತಾಲೂಕು ಪಂಚಾಯ್ತಿಗೆ ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯ್ತಿ, ಬೆಂಗಳೂರು ನಗರ ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.

ವಿಜಯಪುರ ಜಿಲ್ಲೆ – ಬಬಲೇಶ್ವರ, ನಿಡಗುಂದಿ, ತಿಕೋಟ, ದೇವರಹಿಪ್ಪರಗಿ, ತಾಳಿಕೋಟಿ, ಚಡಚಣ, ಕೊಲ್ಹಾರ್ ತಾಲೂಕು ಪಂಚಾಯ್ತಿಗಳಿಗೆ ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯ್ತಿ, ವಿಜಯಪುರ ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.

ಹಾವೇರಿ ಜಿಲ್ಲೆ – ರಟ್ಟಿಹಳ್ಳಿ ತಾಲೂಕು ಪಂಚಾಯ್ತಿಗೆ, ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯ್ತಿ ಹಾವೇರಿ ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.

ಮೈಸೂರು ಜಿಲ್ಲೆ – ಸರಗೂರು ತಾಲೂಕು ಪಂಚಾಯ್ತಿಗೆ ಉಪ ಕಾರ್ಯದರ್ಶಿ(ಅಭಿವೃದ್ಧಿ) ಜಿಲ್ಲಾ ಪಂಚಾಯ್ತಿ ಮೈಸೂರು ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.
ಚಿಕ್ಕಮಗಳೂರು ಜಿಲ್ಲೆ – ಅಜ್ಜಂಪುರ ತಾಲೂಕು ಪಂಚಾಯ್ತಿಗೆ, ಉಪ ಕಾರ್ಯದರ್ಶಿ(ಅಭಿವೃದ್ಧಿ) ಜಿಲ್ಲಾ ಪಂಚಾಯ್ತಿ, ಚಿಕ್ಕಮಗಳೂರು ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.

ಉತ್ತರ ಕನ್ನಡ ಜಿಲ್ಲೆ – ದಾಂಡೇಲಿ ತಾಲೂಕು ಪಂಚಾಯ್ತಿಗೆ, ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯ್ತಿ, ಉತ್ತರ ಕನ್ನಡ ಜಿಲ್ಲೆ ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.

ಕೋಲಾರ ಜಿಲ್ಲೆ – ಕೆಜಿಎಫ್ ತಾಲೂಕು ಪಂಚಾಯ್ತಿಗೆ, ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯ್ತಿ ಕೋಲಾರ ಇವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ