Breaking News

ಐದನೇ ಮಹಡಿಯಿಂದ ಬಿದ್ದು ಮಹಿಳೆ ಸಾವು……

Spread the love

ಬೆಂಗಳೂರು: ಮಹಿಳೆಯೊಬ್ಬರು ಐದನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಜಗಜೀವನ್‌ ರಾಮ್‌ ನಗರದಲ್ಲಿ ನಡೆದಿದೆ.

ಆರ್.ಆರ್ ನಗರದ ನಿವಾಸಿ ಯಶೋಧಾ (45) ಮೃತ ಮಹಿಳೆ. ಜೆಜೆ ನಗರದ ಸಂಬಂಧಿಕರ ಮನೆಗೆ ಹೋಗಿದ್ದಾಗ ಘಟನೆ ನಡೆದಿದೆ.   ರಕ್ತದೊತ್ತಡ ಹಾಗೂ ಮಧುಮೇಹ ಕಾಯಿಲೆಗಳಿಂದ ಬಳಲುತ್ತಿದ್ದ ಯಶೋಧಾ ಅವರು ಸಂಬಂಧಿಕರ ಮನೆ ಹೋಗಿದ್ದರು. ಇಂದು ಊಟ ಮಾಡಿ ಮನೆಯ 5ನೇ ಮಹಡಿಗೆ ಹೋಗಿದ್ದರು. ಈ ವೇಳೆ ತಲೆ ತಿರುಗಿ ಕೆಳಗೆ ಬಿದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಜೆಜೆ ನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಯಶೋಧಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

https://youtu.be/tmeRCcpCcmg


Spread the love

About Laxminews 24x7

Check Also

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Spread the love ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ